ಮೈಸೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿಗಳನ್ನು ಚಿರತೆ ತಿಂದು ಹಾಕಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯದ ಹುಂಡಿ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳು ಬಲಿ - mysore leopard news
ನಂಜನಗೂಡು ತಾಲೂಕಿನ ಹಾಡ್ಯದ ಹುಂಡಿ ಗ್ರಾಮದಲ್ಲಿ ಚಿರತೆಯೊಂದು ದಾಳಿ ಮಾಡಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ಕೂಡಲೇ ಚಿರತೆಯನ್ನು ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಚಿರತೆ ದಾಳಿ
ಗ್ರಾಮದಲ್ಲಿ ಕಳೆದ 4 ದಿನಗಳಿಂದ 20 ಕುರಿಗಳನ್ನು ತಿಂದಿರುವ ಚಿರತೆ, ಇಬ್ಬರು ರೈತರ ಮೇಲೆ ದಾಳಿ ಮಾಡಿದೆ. ಇದೀಗ ಗ್ರಾಮದ ಕೆಂಪಮ್ಮ ಎಂಬ ವೃದ್ಧೆಗೆ ಸೇರಿದ 2 ಕುರಿಗಳನ್ನು ತಿಂದುಹಾಕಿದೆ.
ನರ ಹಂತಕ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಒತ್ತಾಯಿಸಿದ್ದಾರೆ. ಚಿರತೆ ಸೆರೆಹಿಡಿಯದೆ ಹೋದರೆ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಕುರಿ ಕಳೆದುಕೊಂಡಿರುವ ವೃದ್ಧೆ ಕೆಂಪಮ್ಮಗೆ ಸೂಕ್ತ ಪರಿಹಾರ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.