ಮೈಸೂರು:ಹದಿನೈದು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬೀಳುವ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲ್ಲೂಕಿನ ಸೋಮೇಶ್ವರಪುರ ಗ್ರಾಮದ ಸುತ್ತಮುತ್ತ ಆಗಾಗ ಕಾಣಿಸಿಕೊಂಡು ಗ್ರಾಮಸ್ಥರಿಗೆ ಭೀತಿ ಮೂಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ. ಆಗಾಗ ಕಾಣಿಸಿಕೊಂಡು ಜಾನುವಾರುಗಳನ್ನು ತಿಂದು ತೇಗುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಹಾಗಾಗಿ ಗ್ರಾಮದ ನಿವಾಸಿ ಹೊಟ್ಟೆ ಪುಟ್ಟಪ್ಪ ಮಹೇಶ್ ಎಂಬುವರ ಜಮೀನಿನಲ್ಲಿ ಬೋನು ಇಡಲಾಗಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದು, ಆಚೆ ಬರಲು ಘರ್ಜನೆ ಮಾಡುತ್ತಿತ್ತು. ಇದನ್ನು ನೋಡಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.