ಮೈಸೂರು: ಕಾಡುಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಹೆಗ್ಗಡಾಪುರ ಗ್ರಾಮದ ದೇವನಾಯಕ ಎಂಬವರ ಜಮೀನಿನಲ್ಲಿ ನಡೆದಿದೆ. ಗುರುವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ. ಅರಣ್ಯಾಧಿಕಾರಿಗಳಾದ ಡಿಸಿಎಫ್ ಬಸವರಾಜು, ಎಸಿಎಫ್ ಲಕ್ಷ್ಮಿಕಾಂತ್, ಮೇಟಿಕುಪ್ಪೆ ಅರಣ್ಯಾಧಿಕಾರಿ ಹರ್ಷಿತ್ ಹಾಗೂ ಇತರೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯನ್ನು ಕಳೇಬರವನ್ನು ಪಶುವೈದ್ಯ ಮುಜೀದ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಜಮೀನು ಮಾಲೀಕ ದೇವನಾಯಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮೈಸೂರು: ಕಾಡುಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು
ಚಿರತೆ ಸಾವಿಗೀಡಾದ ಪ್ರಕರಣದಲ್ಲಿ ಜಮೀನಿನ ಮಾಲೀಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಉರುಳಿಗೆ ಸಿಲುಕಿ ಜಮೀನಿನಲ್ಲೇ ಚಿರತೆ ಸಾವು