ಮೈಸೂರು: ಜಾನುವಾರುಗಳನ್ನು ತಿಂದು ತೇಗುತ್ತ ಗ್ರಾಮಸ್ಥರಲ್ಲಿ ಜೀವ ಭಯ ಮೂಡಿಸಿದ್ದ ಚಿರತೆ ಬೋನಿಗೆ ಬೀಳುವ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಡುವಂತೆ ಮಾಡಿದೆ.
ಸಿಕ್ಕಾಪಟ್ಟೆ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ ಬಿದ್ದಿರೋದೆ ರೋಚಕ..
ಸರಗೂರು ತಾಲೂಕಿನ ಹಂಚಿಪುರ ಗ್ರಾಮದಲ್ಲಿ ತಿಂಗಳಿನಿಂದ ಸಂಜೆ ವೇಳೆ ಗ್ರಾಮಸ್ಥರಿಗೆ ಕಾಣಿಸಿ ಜೀವ ಭಯ ಹುಟ್ಟಿಸಿದ್ದ ಚಿರತೆ ಇದೀಗ ಬೋನಿನೊಳಗೆ ಬೀಳುವ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ಸರಗೂರು ತಾಲೂಕಿನ ಹಂಚಿಪುರ ಗ್ರಾಮದಲ್ಲಿ ತಿಂಗಳಿನಿಂದ ಸಂಜೆ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ಜಾನುವಾರುಗಳನ್ನು ಎಳೆದುಕೊಂಡು ಹೋಗಿ ತಿಂದು ತೇಗುತ್ತಿತ್ತು. ಚಿರತೆ ಉಪಟಳ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಅರಣ್ಯಾಧಿಕಾರಿಗಳು ರೈತರ ಜಮೀನೊಂದರಲ್ಲಿ ಬೋನು ಇಟ್ಟಿದ್ದರು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದು ಘರ್ಜನೆ ಮಾಡುತ್ತಿದ್ದ ದೃಶ್ಯ ನೋಡಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಸೆರೆ ಸಿಕ್ಕಿರುವ ಚಿರತೆಯನ್ನು ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ.