ಕರ್ನಾಟಕ

karnataka

ETV Bharat / state

ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - leopard fell to the cage in Mysore

ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

leopard fell to the cage in Mysore
ಬೋನಿಗೆ ಬಿದ್ದ ಚಿರತೆ... ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

By

Published : Apr 12, 2020, 12:54 PM IST

ಮೈಸೂರು:ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಆತಂಕವನ್ನುಂಟು ಮಾಡಿದ್ದ ಚಿರತೆ ಕೊನೆಗೂ ಬೋನಿಗೆ ಬೀಳುವ ಮೂಲಕ ಜನರಿಗೆನಿಟ್ಟುಸಿರು ಬಿಡುವಂತೆ ಮಾಡಿದೆ.

ಬೋನಿಗೆ ಬಿದ್ದ ಚಿರತೆ

ಎಚ್.ಡಿ ಕೋಟೆ ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆಯನ್ನ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ, ಕಳೆದ ಒಂದು ತಿಂಗಳಿಂದ ಬೋನು ಇಟ್ಟಿತ್ತು. ಆದರೂ ತಪ್ಪಿಸಿಕೊಳ್ಳುತ್ತಿದ್ದ ಚಿರತೆ, ಆಹಾರ ಅರಸಿ ಬಂದು ಇಂದು ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದ‌ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details