ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾಕತ್ತಿದ್ದರೆ ರಾಜ್ಯದ ಎಲ್ಲಾ ಜಯಂತಿಗಳನ್ನು ರದ್ದು ಮಾಡಲಿ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದರು.
ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿರುವ ಹಿನ್ನೆಲೆ ಮೈಸೂರು ರೈಲ್ವೆ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್, ಯಾರನ್ನು ಕೇಳಿ ಯಡಿಯೂರಪ್ಪ ಅವರು ಟಿಪ್ಪು ಜಯಂತಿಯನ್ನು ರದ್ದು ಮಾಡಿದರು. ರದ್ದು ಮಾಡುವ ಮುನ್ನ ಸಭೆ ಕರೆದು ಇದರ ಬಗ್ಗೆ ಚರ್ಚೆ ನಡೆಸಬೇಕು. ಅಲ್ಲದೇ, ಈಗ ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆಯಲು ಮುಂದಾಗಿರುವ ಧೋರಣೆ ಕೈಬಿಡಬೇಕು ಎಂದು ಆಗ್ರಹಿಸಿದರು.