ಮೈಸೂರು: ಕೊರೊನಾ ಚಿಕಿತ್ಸೆಯ ಹೆಸರಲ್ಲಿ ರಾಜ್ಯ ಸರ್ಕಾರ ಎರಡು ಸಾವಿರ ಕೋಟಿ ರೂ.ಲೂಟಿ ಮಾಡಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
'ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಮಾತನಾಡಲಿ' - BJP President Nalin Kumar Katilu
ಕೊರೊನಾ ಅವ್ಯವಹಾರ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರಿಗೆ ಇಂದಿರಾ ಕ್ಯಾಂಟೀನ್ನಲ್ಲಿ ಆದ ಕೋಟ್ಯಂತರ ರೂ.ಅವ್ಯವಹಾರಗಳ ಬಗ್ಗೆ ಮಾತನಾಡಲು ಹೇಳಿ. ಗದಗದಲ್ಲಿ ಈಶ್ವರ್ ಖಂಡ್ರೆ ಅವರ ನಿವೇಶನದ ಅಕ್ರಮದ ಬಗ್ಗೆ ಉಲ್ಲೇಖ ಮಾಡಲು ಹೇಳಿ ಎಂದು ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ನಳೀನ್ ಕುಮಾರ್ ಕಟೀಲ್
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಖರ್ಚುವೆಚ್ಚದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಕುಟುಕಿದರು.
ಜಿಲ್ಲೆಗಳ ತಳಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡುವ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಭೇಟಿ ನೀಡಿ, ಪಕ್ಷದ ಮುಖಂಡರಿಂದ ಮಾಹಿತಿ ಪಡೆಯುತ್ತಿರುವೆ. ಈ ಮೂಲಕ ಕಾರ್ಯಕರ್ತರಲ್ಲೂ ಹುರುಪು ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದರು.