ಕರ್ನಾಟಕ

karnataka

ಅಪೌಷ್ಠಿಕತೆಯಲ್ಲಿ ದೇಶದ ಸೂಚ್ಯಂಕ ಏರಿಕೆ.. ಇದಕ್ಕೆ ವಿಶ್ವಗುರು ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

By ETV Bharat Karnataka Team

Published : Nov 22, 2023, 4:08 PM IST

Anemia free Nutritional Karnataka Program: ಬಡತನ- ದಾರಿದ್ರ್ಯ- ಅನಕ್ಷರತೆ ಎನ್ನುವ ಮೂರು ಪಿಡುಗುಗಳನ್ನು ತೊಡೆದು ಹಾಕಿ ರಾಜ್ಯದ ಜನರ ಆರೋಗ್ಯಕ್ಕಾಗಿ ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Anemia free Nutritional Karnataka Programe inauguration
ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ. ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ಮನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗುಜರಾತ್ ಮಾದರಿ ಎಂದು ಭಜನೆ ಮಾಡಿದವರು ಗುಜರಾತ್ ರಾಜ್ಯ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೇರುತ್ತಾ, ಆರೋಗ್ಯ ಸೂಚ್ಯಂಕದಲ್ಲಿ ಕುಸಿಯುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಹೀಗಿರುವಾಗ ಗುಜರಾತ್​ ರಾಜ್ಯ ಇಡೀ ದೇಶಕ್ಕೆ ಮಾದರಿ ಆಗಲು ಸಾಧ್ಯವೇ ಎಂದು ಲೇವಡಿ ಮಾಡಿದರು.

ಬಡತನ- ದಾರಿದ್ರ್ಯ- ಅನಕ್ಷರತೆ ಹೋಗದೇ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ಧವಿದೆ ಎಂದರು.

ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಸೇರಿ ನಮ್ಮ ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರೂ ಅತ್ಯಂತ ಆರೋಗ್ಯವಂತರಾಗುವಂತೆ ಇನ್ನಷ್ಟು ಹೆಚ್ಚೆಚ್ಚು ಶ್ರಮಿಸಿ ಸರ್ಕಾರದ ಗುರಿ ಸಾಧಿಸಿ ತೋರಿಸಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಪ್ರತಿಭಟನೆಗಳು ಕಡಿಮೆಯಾದರೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ಅನುಕೂಲ : ಸಭಾಪತಿ ಬಸವರಾಜ ಹೊರಟ್ಟಿ

ABOUT THE AUTHOR

...view details