ಕರ್ನಾಟಕ

karnataka

ETV Bharat / state

ಮೈಸೂರು: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ - ಈಟಿವಿ ಭಾರತ್ ಕನ್ನಡ ಸುದ್ದಿ

ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆಗೈದ ಅಪರಾಧಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡಸಮೇತ ಜೀವಾವಧಿ ಶಿಕ್ಷೆ ವಿಧಿಸಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

By

Published : Feb 8, 2023, 4:32 PM IST

ಮೈಸೂರು :ಕುಡಿದು ಬಂದು ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಕೊಂದು ಹಾಕಿದ್ದ ಪತಿಗೆ ಮೈಸೂರಿನ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ್ ಅವರು 17 ಸಾವಿರ ರೂಪಾಯಿ ದಂಡ ಹಾಗು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಮಟಗೆರಿ ಗ್ರಾಮದ ಸಿದ್ದರಾಜು ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಪ್ರಕರಣದ ವಿವರ: ಈತ ಹೆಚ್.ಡಿ.ಕೋಟೆ ತಾಲೂಕಿನ ಕಾಟೂರು ಗ್ರಾಮದ ಸಹನಾ ಎಂಬುವವರನ್ನು 2012ರಲ್ಲಿ ವಿವಾಹವಾಗಿದ್ದ. ಕೆಲವು ತಿಂಗಳು ಪತ್ನಿಯ ಜೊತೆಗೆ ಅನ್ಯೋನ್ಯವಾಗಿದ್ದ ಈತ ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಡುತ್ತಿದ್ದ. ಎಷ್ಟೇ ಬುದ್ಧಿವಾದ ಹೇಳಿದರೂ ಪ್ರಯೋಜನವಾಗದ ಕಾರಣ ಪೋಷಕರು ಮಗಳನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದರು. ಸಿದ್ದರಾಜು ಪ್ರಾರಂಭದಲ್ಲಿ ಸಣ್ಣಪುಟ್ಟ ಕಾರಣಗಳಿಗೆ ಜಗಳವಾಡುತ್ತಿದ್ದನಂತೆ. ಕೆಲವು ದಿನಗಳು ಕಳೆದ ಹಾಗೆ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಲು ಶುರು ಮಾಡಿದ್ದಾನೆ. ಅನೈತಿಕ ಸಂಬಂಧ ಹೊಂದಿದ್ದಾಳೆಂದು ದೈಹಿಕ, ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದ. ಪತ್ನಿ ತವರು ಮನೆಗೆ ಹೋದ ಮೇಲೂ ಅಲ್ಲಿಗೂ ಕುಡಿದು ಹೋಗಿ ಗಲಾಟೆ ಮಾಡುತ್ತಿದ್ದ.

ಇದನ್ನೂ ಓದಿ :ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ.. ಬೆಂಗಳೂರಲ್ಲಿ ಹರಿದ ನೆತ್ತರು

ಸಿದ್ದರಾಜು ತನ್ನ ಪತ್ನಿಯ ವಿರುದ್ದ ತಿರುಗಿ ಬೀಳಲು ಅವರ ಅಣ್ಣ ಮತ್ತು ಅತ್ತಿಗೆ ಇಬ್ಬರು ಕುಮ್ಮಕ್ಕು ನೀಡಿದ್ದರು ಎಂದು ತಿಳಿದು ಬಂದಿದೆ. ಒಂದು ದಿನ ಸಿದ್ಧರಾಜು ಅನೈತಿಕ ಸಂಬಂಧ ಹೊಂದಿದ್ದೀಯಾ ಎಂದು ಮರದ ಸಲಕರಣೆಯಿಂದ ಪತ್ನಿಗೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಸಹನಾಳನ್ನು ಹೆಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

ಅಪಘಾತದಿಂದ ಪಾರಾದ ಯುವಕ; ಮೈ ಜುಂ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ..

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ: ಅಪಹರಿಸಿ ಕೊಲೆ ಮಾಡಿರುವ ಆರೋಪ

ಈ ಸಂಬಂಧ ಸಿದ್ದರಾಜು‌ ಮತ್ತು ಆತನ ಅಣ್ಣ, ಅತ್ತಿಗೆಯ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ತಪ್ಪಿತಸ್ಥ ಸಿದ್ದರಾಜುಗೆ 17 ಸಾವಿರ ರೂ ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಇನ್ನಿಬ್ಬರನ್ನು ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ.. ಬೆಂಗಳೂರಲ್ಲಿ ತಾತನಿಗೆ 20 ವರ್ಷ ಶಿಕ್ಷೆ ಆದೇಶ

ABOUT THE AUTHOR

...view details