ಮೈಸೂರು: ಜನವಸತಿ ಪ್ರದೇಶದಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್‌ನ ತೆರವುಗೊಳಿಸಿ ಎಂದು ಸಾರ್ವಜನಿಕರೇ ಪ್ರತಿಭಟನೆ ನಡೆಸಿದ ಘಟನೆ ನಗರದ ಕ್ಯಾತಮಾರನಹಳ್ಳಿಯ ಟೆಂಟ್ ಸರ್ಕಲ್ನಲ್ಲಿ ನಡೆದಿದೆ.
ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ - mysore protest
ಟೆಂಟ್ ಸರ್ಕಲ್ನಲ್ಲಿ ಲಾಕ್ಡೌನ್ ಸಡಿಲಿಕೆ ನಂತರ ವೈನ್ ಶಾಪ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಆರಂಭವಾಗಿವೆ. ಇದರಿಂದ ಮಹಿಳೆಯರು, ಮಕ್ಕಳು ಓಡಾಡಲು ಕಷ್ಟವಾಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸುವಂತೆ ಆಗ್ರಹ
ನಗರದ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಕ್ಯಾತಮಾರನಹಳ್ಳಿ ಟೆಂಟ್ ಸರ್ಕಲ್ನಲ್ಲಿ ಲಾಕ್ಡೌನ್ ನಂತರ ವೈನ್ ಶಾಪ್ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ಗಳು ಆರಂಭವಾಗಿವೆ. ಇದರಿಂದ ಮಹಿಳೆಯರು, ಮಕ್ಕಳು ಓಡಾಡಲು ಕಷ್ಟವಾಗಿದೆ. ಜೊತೆಗೆ ನೆಮ್ಮದಿಯಿಂದ ಇಲ್ಲಿ ಬದುಕಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ವೈನ್‌ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Last Updated : Jun 23, 2020, 3:29 PM IST