ಮೈಸೂರು: ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ನಾಲ್ಕು ಜನ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮೈಸೂರು ಮಹಾ ನಗರ ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತ ಮಹೇಶ್ ಕುಮಾರ್, ನಂಜನಗೂಡಿನ ಸಬ್ ರಿಜಿಸ್ಟರ್ ಶಿವಶಂಕರ್ ಮೂರ್ತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಇಂಜಿನಿಯರ್ ನಾಗೇಶ್ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಮುತ್ತ ಅವರ ಮನೆ ಹಾಗೂ ಇತರ ಕಡೆ ಲೋಕಾಯುಕ್ತ ಪೋಲಿಸರು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಮೈಸೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸುರೇಶ್ ಬಾಬು ನೇತೃತ್ವದ ತಂಡ, ಮೈಸೂರಿನ ನಾಲ್ಕು ಅಧಿಕಾರಿಗಳ ಮನೆ ಹಾಗೂ ಇತರ ಕಡೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ವಿಭಾಗದ ಉಪ ಆಯುಕ್ತ ಮಹೇಶ್ ಕುಮಾರ್ ಅವರ ಮೈಸೂರಿನ ನಿವೇದಿತಾ ನಗರದ ಮನೆ ಹಾಗೂ ಅವರಿಗೆ ಸೇರಿದ 13 ಕಡೆ, ಅದರಲ್ಲಿ ತೋಟದ ಮನೆ ಸೇರಿದಂತೆ ಹಲವಾರು ಕಡೆ ಲೋಕಾಯುಕ್ತರು ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇನ್ನೂ ನಂಜನಗೂಡಿನಲ್ಲಿ ಸಬ್ ರಿಜಿಸ್ಟರ್ ಆಗಿ ಕೆಲಸ ಮಾಡುತ್ತಿರುವ ಶಿವಶಂಕರ್ ಮೂರ್ತಿ ಅವರ ಮೈಸೂರಿನ ಮನೆ ಹಾಗೂ ಇತರ ಸ್ಥಳಗಳಲ್ಲಿ ಲೋಕಾಯುಕ್ತರ ತಂಡ ದಾಳಿ ಮಾಡಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ದೂರಿನ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೋಲಿಸರು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಇಂಜಿನಿಯರ್ ನಾಗೇಶ್ ಅವರ ಮೈಸೂರಿನ ಮನೆ ಹಾಗೂ ಇತರ ಕಡೆ ಅವರು ಆಸ್ತಿ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ ಲೋಕಾಯುಕ್ತ ಪೋಲಿಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದರ ಜೊತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ವರ್ಷಗಳಿಂದ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಮುತ್ತ ಎಂಬವರ ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಇರುವ ಮನೆಯ ಮೇಲೆ, ಆಸ್ತಿ ಹೊಂದಿರುವ ದೂರಿನ ಹಿನ್ನೆಲೆ ಲೋಕಾಯುಕ್ತ ಪೋಲಿಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಲಬುರಗಿಯಲ್ಲಿ ಕೆಆರ್ಐಡಿಎಲ್ ಅಧಿಕಾರಿ ಮನೆ ಮೇಲೆ ದಾಳಿ:ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ಐಡಿಎಲ್) ಕಲಬುರಗಿಯ ಇಂಚಾರ್ಜ್ ಹಾಗೂ ಕೊಪ್ಪಳ ಜಿಲ್ಲೆಯ ಕೆಆರ್ಐಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್(EE) ಝರಣಪ್ಪ ಚಿಂಚೋಳಿಕರ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವಿರೇಂದ್ರ ಪಾಟೀಲ್ ಬಡಾವಣೆಯ 3 ಫೇಸ್, ನಿರ್ಮಾಣ ಹಂತದ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್ಸ್ಪೆಕ್ಟರ್ ಧ್ರುವತಾರಾ ನೇತೃತ್ವದಲ್ಲಿ 10 ಜನರ ತಂಡದಿಂದ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಗೆ ನಿರ್ಮಾಣ ಹಂತದ ಕಟ್ಟದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ವಿಚಾರಣೆಯಲ್ಲಿ ತೊಡಗಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಹುಮನಬಾದ್ ತಾಲೂಕಿನ ಚಿಟಗುಪ್ಪ ನಿವಾಸಿಯಾದ ಚಿಂಚೋಳಿಕರ್, ಬೀದರ್ ನಗರದ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ:ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ