ಮೈಸೂರು:ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಲ್ಲಿ ಹೆಚ್ಚಾಗಿ ಬಿಜೆಪಿ ಮುಖಂಡರೇ ಇದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಈಟಿವಿ ಭಾರತದ ಜೊತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಕೋಮುವಾದಿಗಳಿಂದ ಪಾಲಿಕೆಯನ್ನು ರಕ್ಷಿಸಲಿ ಎಂದು ಮಹಾನಗರ ಪಾಲಿಕೆ ಚುನಾವಣೆಯ ಕೊನೆ ಕ್ಷಣದಲ್ಲಿ ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಆದರೆ ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟು ಮಾಡಲು ಯತ್ನಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಂಹ ವಿರುದ್ಧ ಗುಡುಗಿದ ಲಕ್ಷ್ಮಣ್:
ಸಂಸದ ಪ್ರತಾಪ್ ಸಿಂಹ ಮೈಸೂರು ಅಭಿವೃದ್ಧಿಗೆ 5 ಪೈಸೆ ಹಣ ತಂದಿಲ್ಲ. ಎಲ್ಲವೂ ಸಿದ್ದರಾಮಯ್ಯ ಕಾಲದಲ್ಲಿ ಬಂದಿದ್ದು. ಈಗ ರಾಜ್ಯದಂತೆ ಕೇಂದ್ರ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ. ರಾಜ್ಯದಲ್ಲಿ 2,000 ಗಣಿಗಾರಿಕೆ ನಡೆಯುತ್ತಿದ್ದು, ಅದರಲ್ಲಿ ಶೇ. 50ರಷ್ಟು ಪರವಾನಗಿ ಪಡೆಯದೆ ಅಕ್ರಮವಾಗಿ ನಡೆಯುತ್ತಿವೆ. ಇದರಲ್ಲಿ ಬಿಜೆಪಿ ಮುಖಂಡರು ಹೆಚ್ಚಾಗಿ ಇದ್ದಾರೆ ಎಂದು ಆರೋಪಿಸಿದರು.
ಕಳೆದ ತಿಂಗಳು ಶಿವಮೊಗ್ಗ, ಮೊನ್ನೆ ಚಿಕ್ಕಬಳ್ಳಾಪುರದ ಬಳಿ ನಡೆದ ಸ್ಫೋಟದ ಗಣಿಗಾರಿಕೆಯ ಮಾಲೀಕರು ಬಿಜೆಪಿಯವರೇ ಆಗಿದ್ದಾರೆ. ಚಿಕ್ಕಬಳ್ಳಾಪುರ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯ ಮಾಲೀಕರು ಸಚಿವ ಸುಧಾಕರ್ ಸಂಬಂಧಿಕರಾಗಿದ್ದಾರೆ ಎಂದು ದೂರಿದರು.