ಮೈಸೂರು: ಪ್ರೀತಿಸಿದ ಹುಡುಗಿಗೆ ಬೇರೆ ಹುಡುಗನೊಂದಿಗೆ ಮದುವೆ ಫಿಕ್ಸ್ ಆಗಿದ್ದು, ಹುಡುಗಿ ಕೈ ಜಾರಿದಾಳೆಂದು ಮನನೊಂದು ಸಿದ್ದರಾಜು ಎಂಬ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ 22 ವರ್ಷ ವಯಸ್ಸಿನ ಸಿದ್ದರಾಜು ಮೈಸೂರು ಜಿಲ್ಲೆ ನಂಜನಗೂಡು ಸಮೀಪದ ಕಸುವಿನಹಳ್ಳಿ ಗ್ರಾಮದವನು. ಈತ ಮೈಸೂರು ನಗರದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಈ ವಿಷಯ ಯುವತಿ ಮನೆಯವರಿಗೆ ತಿಳಿದು ಬೇರೆ ಯುವಕನೊಂದಿಗೆ ಮದುವೆ ಮಾಡಲು ಯತ್ನಿಸಿದ್ದಾರೆ. ಹೀಗಾಗಿ ಯುವತಿ ಸಿದ್ದರಾಜುವನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ನನ್ನ ಸಾವಿಗೆ ಯುವತಿ ಹಾಗೂ ಆಕೆಯ ತಾಯಿ ಕಾರಣ ಅವರಿಗೆ ಜೈಲು ಶಿಕ್ಷೆಯಾಗಬೇಕು ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರೇಮ ವೈಫಲ್ಯ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ - undefined
ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಮನನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ
ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ
ಈ ಸಂಬಂಧ ನಂಜನಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
TAGGED:
mys-bulletin.jpg