ಮೈಸೂರು:ನಾಳೆ ಈ ವರ್ಷದ ಕೊನೆಯ ಚಂದ್ರ ಗ್ರಹಣ ಘಟಿಸಲಿದೆ. ಈ ಹಿನ್ನೆಲೆಯಲ್ಲಿ ನಾಡ ಅಧಿದೇವತೆಯಾದ ಶ್ರೀ ಚಾಮುಂಡೇಶ್ವರಿ ದೇವಾಲಯ ಸಂಜೆ 6 ಗಂಟೆಯ ನಂತರ ಬಂದ್ ಆಗಲಿದೆ ಎಂದು ಚಾಮುಂಡಿ ಬೆಟ್ಟದ ಆಡಳಿತ ಮಂಡಳಿಯ ನಿರ್ವಾಹಕ ಅಧಿಕಾರಿ ಸಿ.ಜೆ.ಕೃಷ್ಣ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ 7.30 ಕ್ಕೆ ಮತ್ತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಭಕ್ತರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಮೈಸೂರು: ನಾಳೆ ಸಂಜೆ 6ರ ನಂತರ ಚಾಮುಂಡೇಶ್ವರಿ ದೇವಾಲಯ ಬಂದ್ - ಚಾಮುಂಡಿ ಬೆಟ್ಟದ ದೇವಿಕೆರೆ
ಚಂದ್ರಗ್ರಹಣದ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆಯ ನಂತರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯ ಬಂದ್ ಆಗಲಿದೆ.
ಚಾಮುಂಡೇಶ್ವರಿ ದೇವಾಲಯ
Published : Oct 27, 2023, 9:18 PM IST
ಆದರೆ ನವರಾತ್ರಿಯ ಕೊನೆಯ ಕಾರ್ಯಕ್ರಮ ಚಾಮುಂಡೇಶ್ವರಿ ತಾಯಿಯ ತೆಪ್ಪೋತ್ಸವ ಕಾರ್ಯಕ್ರಮ ಚಾಮುಂಡಿ ಬೆಟ್ಟದ ದೇವಿಕೆರೆಯಲ್ಲಿ ಶನಿವಾರ ಸಂಜೆ 5 ಗಂಟೆಗೆ ಸಾಂಪ್ರದಾಯಿಕವಾಗಿ ನಡೆಯಲಿದೆ. ಬಳಿಕ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ:ಮೈಸೂರು ದಸರಾ ದೀಪಾಲಂಕಾರ ಅವಧಿ ವಿಸ್ತರಣೆ: ಹಲವು ರಸ್ತೆಗಳಲ್ಲಿ ಏಕಮುಖ ಸಂಚಾರ