ಮೈಸೂರು: ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ವಾಶ್ ಔಟ್ ಮಾಡಿದ್ದಾರೆ. ಆದರೂ ಅವರಿಗೆ ಬುದ್ಧಿ ಬಂದಿಲ್ಲ ಅನಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ತಿರುಗೇಟು ನೀಡಿದ್ದಾರೆ.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ವಾಶ್ ಔಟ್ ಮಾಡಿದ್ದಾರೆ. ಆದರೂ ಅವರಿಗೆ ಇನ್ನು ಬುದ್ಧಿ ಬಂದಿಲ್ಲ ಅನಿಸುತ್ತದೆ. ಪಕ್ಷ ನಾಯಕರಾದವರು ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಉತ್ತಮ ಸಲಹೆ ಕೊಡಲಿ ಎಂದು ಕುಟುಕಿದರು.