ಮೈಸೂರು: ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಶಾಸಕ ಮುನಿರತ್ನ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀಗಳ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಖಾತೆ ಬದಲಾವಣೆ ಹಿನ್ನೆಲೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ಮೈಸೂರಿನ ಸುತ್ತೂರು ಮಠಕ್ಕೆ ಆಗಮಿಸಿ ಶ್ರೀಗಳ ಜೊತೆ 2 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.