ಮೈಸೂರು:ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಮಹಾದೇವಮ್ಮ ದೇವಸ್ಥಾನ ತೆರವು ಮಾಡಿರುವುದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಸದಸ್ಯರು ಅಗ್ರಹಾರ ವೃತ್ತದ ನೂರೊಂದು ಗಣಪತಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾಗಿ ಪರಿಶೀಲಿಸದ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ದಿಕ್ಕುತಪ್ಪಿಸಿ, ರಸ್ತೆ ಬದಿಯಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸುವ ಮೂಲಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.