ಮೈಸೂರು:ನಾಡಹಬ್ಬ ದಸರಾ ಮಹೋತ್ಸವ ಸಂಪನ್ನಗೊಂಡ ಬಳಿಕ ಸಂಪ್ರದಾಯದಂತೆ ಇಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9:40 ರಿಂದ 10:05 ರೊಳಗಿನ ಶುಭ ಮುಹೂರ್ತದಲ್ಲಿ ಸರಳ ರೀತಿಯಲ್ಲಿ ರಥೋತ್ಸವ ನಡೆದಿದೆ.
ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕ ರಥೋತ್ಸವಕ್ಕೆ ಯದುವೀರ್ ಚಾಲನೆ
ದಸರಾ ಮಹೋತ್ಸವ ಮುಗಿದ ನಂತರ ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ ನಡೆಯುವುದು ವಾಡಿಕೆಯಾಗಿದ್ದು ಇಂದು ರಾಜವಂಶಸ್ಥ ಯದುವೀರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಕೋವಿಡ್-19 ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿದೆ.
ಚಾಮುಂಡಿ ಬೆಟ್ಟದಲ್ಲಿ ಸಂಪ್ರದಾಯಿಕ ರಥೋತ್ಸವಕ್ಕೆ ಮಹಾರಾಜ ಯದುವೀರ್ ಚಾಲನೆ
ಯದುವೀರ್ ಅವರು ಚಾಮುಂಡೇಶ್ವರಿ ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಮಂಗಳ ವಾದ್ಯ ಮೇಳಗಳೊಂದಿಗೆ ರಥ ದೇವಾಲಯದ ಪ್ರಾಂಗಣದಲ್ಲಿ ಒಂದು ಸುತ್ತು ಪ್ರದಕ್ಷಿಣೆ ಹಾಕಿದೆ. ಮಧ್ಯಾಹ್ನ 12 ಗಂಟೆಯವರೆಗೂ ಬೆಟ್ಟಕ್ಕೆ ಭಕ್ತರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿದೆ.