ಮೈಸೂರು: ಈ ಬಾರಿ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಎರಡು ವರ್ಷಗಳ ನಂತರ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.