ಕರ್ನಾಟಕ

karnataka

ETV Bharat / state

ಮೈಸೂರು: ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ.. ಮನೆಯಲ್ಲಿದ್ದವ ಸಜೀವ ದಹನ - ಬೆಂಕಿಗೆ ಮನೆಯಲ್ಲಿದ್ದವ ಸಜೀವ ದಹನ

ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೋರ್ವ ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

man-burnt-alive-in-mysore-house-fire-incident
ಮೈಸೂರು: ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ.. ಮನೆಯಲ್ಲಿದ್ದವ ಸಜೀವ ದಹನ

By

Published : Mar 12, 2022, 10:07 PM IST

Updated : Mar 12, 2022, 10:28 PM IST

ಮೈಸೂರು:ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.

ಗ್ರಾಮದ ಸೋಮಶೇಖರಪ್ಪ(53) ಎಂಬಾತ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ವ್ಯಕ್ತಿ. ಶಾರ್ಟ್ ಸರ್ಕ್ಯೂಟ್​​ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಒಬ್ಬರೇ ಇದ್ದ ಸೋಮಶೇಖರಪ್ಪ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

ಅಲ್ಲದೆ, ಬೆಂಕಿಯು ಅಕ್ಕಪಕ್ಕದ ಎರಡು ಮನೆಗಳಿಗೂ ಆವರಿಸಿದ್ದು, ಆ ಮನೆಗಳೂ ಕೂಡ ಭಸ್ಮವಾಗಿದೆ‌. ಘಟನೆಯಲ್ಲಿ ಮನೆಯಲ್ಲಿದ್ದ ಚಿನ್ನ, ಒಡವೆ, ಹಣ ಸಂಪೂರ್ಣ ನಾಶವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತವನ್ನ ತಪ್ಪಿಸಿದ್ದಾರೆ‌. ಈ ಸಂಬಂಧ ತಿ.ನರಸಿಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಖಾನಾಪುರದಲ್ಲಿ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ.. ಕಂದಮ್ಮಗಳು ಕಣ್ಬಿಡುವ ಮುನ್ನವೇ ತಾಯಿ ವಿಧಿವಶ

Last Updated : Mar 12, 2022, 10:28 PM IST

ABOUT THE AUTHOR

...view details