ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಕೋಡಿಬಿದ್ದ ಕೆರೆ.. ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಮೃತ - ಶಾಸಕ ಜಿ ಟಿ ದೇವೇಗೌಡ

ಮೈಸೂರಿನ ಜಯಪುರ ಹೋಬಳಿಯ ಕಗ್ಗೆರೆ ಗ್ರಾಮದಲ್ಲಿ ಕೋಡಿ ಬಿದ್ದ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟರವ್ಯಕ್ತಿಯ ಕುಟುಂಬಕ್ಕೆ ಶಾಸಕ ಜಿಟಿಡಿ ಸಾಂತ್ವನ
ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಶಾಸಕ ಜಿಟಿಡಿ ಸಾಂತ್ವನ

By

Published : Aug 28, 2022, 5:24 PM IST

ಮೈಸೂರು: ಕೋಡಿ ಬಿದ್ದ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಮೈಸೂರಿನ ಜಯಪುರ ಹೋಬಳಿಯ ಕಗ್ಗೆರೆ ಗ್ರಾಮದಲ್ಲಿ ನಡೆದಿದೆ.

ಮಾವಿನಹಳ್ಳಿ ಗ್ರಾಮದ ಮಹೇಶ್ (45) ಕಗ್ಗೆರೆ ಕೋಡಿ ಹತ್ತಿರ ರಸ್ತೆ ದಾಟುವಾಗ ಕಾಲು ಜಾರಿ ಬಿದ್ದು ಕೆರೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಾಸಕ ಜಿ ಟಿ ದೇವೇಗೌಡ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ.

ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಶಾಸಕ ಜಿಟಿಡಿ ಸಾಂತ್ವನ

ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಾರೆ. ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಓದಿ:ಬುಡುಬುಡಿಕೆ ದಾಸನಿಂದ ಮೋಸ: ಚಿನ್ನಾಭರಣ ಕಳೆದುಕೊಂಡ ದಂಪತಿ

ABOUT THE AUTHOR

...view details