ಮೈಸೂರು: ಮರ ಉರುಳಿ ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ.
ಮರ ಉರುಳಿ ಬಿದ್ದು ವ್ಯಕ್ತಿ ಸಾವು - Man died in Mysuru
ಮಳೆ ಹಿನ್ನೆಲೆ ಮರದ ಕೆಳಗೆ ನಿಂತಿದ್ದ ವ್ಯಕ್ತಿಯೊಬ್ಬನ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಮಾದೇವೇಗೌಡ (50) ಮೃತ ದುರ್ದೈವಿ. ಮಳೆ ಬರುತ್ತಿದ್ದ ಕಾರಣ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಮೈ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಹೆಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಅನೀಲ್ ಚಿಕ್ಕಮಾದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸಿದರು.