ಕರ್ನಾಟಕ

karnataka

ETV Bharat / state

ಬೈಕ್​ಗೆ ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು - ಮೈಸೂರು ಅಪಘಾತ

ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು , ಬೈಕ್ ಸವಾರ ಸಂಜು ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Mysore
ಅಪಘಾತ

By

Published : Jul 4, 2020, 1:31 PM IST

ಮೈಸೂರು: ಲಾರಿಯೊಂದು ಬೈಕ್​​​​​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಮಾನಂದವಾಡಿ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ನಡೆದ ಅಪಘಾತ

ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಬೈಕ್ ಸವಾರ ಸಂಜು ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಹಂಪಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಬಿಟ್ಟೂ ಬಿಡದೇ ಸತತವಾಗಿ ಸುರಿಯುತ್ತಿರುವ ಜಡಿ ಮಳೆಯಿಂದ ಈ ಅಪಘಾತ ಸಂಭವಿಸಿದ್ದು , ಅಪಘಾತ ನಡೆದ ಸ್ಥಳದಲ್ಲಿ ಲಾರಿ ಬಿಟ್ಟು ಓಡಿ ಹೋಗುತ್ತಿದ್ದ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ABOUT THE AUTHOR

...view details