ಕರ್ನಾಟಕ

karnataka

ETV Bharat / state

ಬೈಕ್​-ಲಾರಿ ನಡುವೆ ಭೀಕರ ಅಪಘಾತ : ಬೈಕ್​​ ಸವಾರನ ತಲೆ ಛಿದ್ರ - ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಬೈಕ್ ಸವಾರನ ತಲೆ ಛಿದ್ರಗೊಂಡಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ಮೈಸೂರು ಜಿಲ್ಲೆ ತಿ. ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ..

man dies in a bike-lorry accident in mysore
ಯುವಕ ದುರ್ಮರಣ

By

Published : Dec 7, 2020, 7:59 AM IST

ಮೈಸೂರು :ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್​ ಹಿಂಬದಿ ಕುಳಿತಿದ್ದ ಯುವಕ‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿ‌.ನರಸೀಪುರ ತಾಲೂಕಿನಲ್ಲಿ ನಡೆದಿದೆ.

ಯುವಕ ದುರ್ಮರಣ

ತಾಲೂಕಿನ ಸೋಸಲೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ರಾಜು (19) ಎಂಬಾತ ಮೃತ ದುರ್ದೈವಿ. ಬೈಕ್ ಹಿಂಬದಿ ಸವಾರ ತರುಣ್​ನನ್ನು ಹೆಚ್ಚಿನ ಚಿಕಿತ್ಸೆಗೆ ತಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ನೇಹಿತನ ಮನೆಗೆ ಹೋಗುವಾಗ ಮಾರ್ಗಮಧ್ಯೆ ರಾಜು‌ ಹೆಣವಾಗಿದ್ದಾನೆ. ಅಪಘಾತವೆಸಗಿ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ABOUT THE AUTHOR

...view details