ಮೈಸೂರು :ವ್ಯಕ್ತಿಯ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಸಮೀಪದ ಆಧೀಶ್ವರ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ. ಇಲವಾಲ ನಿವಾಸಿ ರವೀಶ್ (36) ಕೊಲೆಯಾದ ದುರ್ದೈವಿ. ಈತ ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾಗಿದ್ದು, ಮೈಸೂರಿನ ಇಲವಾಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಮೈಸೂರು : ಕುತ್ತಿಗೆ ಸೀಳಿ ವ್ಯಕ್ತಿಯ ಹತ್ಯೆ.. ಕಾರಣ ನಿಗೂಢ - ಇಲವಾಲ ಪೊಲೀಸ್ ಠಾಣೆ
ಮೈಸೂರಿನ ಹೂಟಗಳ್ಳಿಯಲ್ಲಿ ಅಂಗಡಿ ಇಟ್ಟುಕೊಂಡಿದ್ದರು. ಹೂಟಗಳ್ಳಿಯ ಖಾಲಿ ಜಾಗದಲ್ಲಿ ರವೀಶ್ನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಕುತ್ತಿಗೆ ಸೀಳಿ ವ್ಯಕ್ತಿಯ ಹತ್ಯೆ..ಕಾರಣ ನಿಗೂಢ
ಮೈಸೂರಿನ ಹೂಟಗಳ್ಳಿಯಲ್ಲಿ ಅಂಗಡಿ ಇಟ್ಟುಕೊಂಡಿದ್ದರು. ಹೂಟಗಳ್ಳಿಯ ಖಾಲಿ ಜಾಗದಲ್ಲಿ ರವೀಶ್ನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.