ಕರ್ನಾಟಕ

karnataka

ETV Bharat / state

ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಪತ್ನಿ ಕೊಲೆಗೈದ ಪತಿ - ನಂಜನಗೂಡು ನಗರದ ಚಾಮಲಾಪುರ ಹುಂಡಿ

Mysore crime: ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ತುಂಬು ಗರ್ಭಿಣಿ ಪತ್ನಿಯನ್ನು ಆಕೆಯ ಪತಿ ಬ್ಲೇಡ್​ನಿಂದ ಕತ್ತು ಸೀಳಿ ಹತ್ಯೆಗೈದಿರುವ ಪ್ರಕರಣ ನಡೆದಿದೆ.

Man Kills Pregnant Wife In Mysore
ಶೋಭಾ ಹಾಗೂ ಮಂಜುನಾಥ್

By ETV Bharat Karnataka Team

Published : Sep 15, 2023, 8:54 AM IST

ಮೈಸೂರು:ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ.

8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ ಶೋಭಾ 8 ತಿಂಗಳ ಗರ್ಭಿಣಿಯಾಗಿದ್ದಳು. ತವರು ಮನೆಯಿಂದ ಮನೆಗೆ ಪತ್ನಿ ಬರುತ್ತಿಲ್ಲವೆಂದು ಜಗಳ ತೆಗೆದ ಪತಿ ಕುಡಿದ ಮತ್ತಿನಲ್ಲಿ ಬ್ಲೇಡ್​ನಿಂದ ಕುತ್ತಿಗೆ ಕೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಾರಣಾಂತಿಕವಾಗಿ ಗಾಯಗೊಂಡಿದ್ದ ಗರ್ಭಿಣಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಶಿವಮೊಗ್ಗ: ಹೆತ್ತ ಅಮ್ಮನನ್ನೇ ಕೊಂದನಾ ಕುಡುಕ ಮಗ?

ವೈದ್ಯರು ಗರ್ಭಿಣಿ ಮತ್ತು ಶಿಶುವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ತಾಯಿಯ ಗರ್ಭದಲ್ಲಿದ್ದ ಶಿಶು ಪ್ರಪಂಚವನ್ನು ನೋಡುವ ಮುನ್ನವೇ ಕಣ್ಮುಚ್ಚಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಂಜನಗೂಡು ಪಟ್ಟಣ ಪೊಲೀಸರು ಮಹಜರು ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ.. ಸಿಸಿಟಿವಿಯಲ್ಲಿ‌ ಕೃತ್ಯ ಸೆರೆ

ಬೆಂಗಳೂರಿನಲ್ಲಿ ಜೋಡಿ ಕೊಲೆ:ಇತ್ತೀಚೆಗೆ ನಗರದಲ್ಲಿ ಭಯಾನಕ ಜೋಡಿ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಗಂಡನೇ ತನ್ನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕಿಸಿದ್ದರು. ಈ ಬಗ್ಗೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಗಲಗುಂಟೆ ಠಾಣಾ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ಮಂಗಳವಾರ ರಾತ್ರಿ(ಸೆ.6) ಈ ಜೋಡಿ ಹತ್ಯೆ ನಡೆದಿತ್ತು. ನವನೀತಾ (35) ಹಾಗೂ ಪುತ್ರ ಸಾಯಿ ಸೃಜನ್ (8) ಕೊಲೆಯಾದವರು. ಚಂದ್ರು (38) ಪತ್ನಿಗೆ ಚಾಕುವಿನಲ್ಲಿ ಇರಿದು, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಆರೋಪಿ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ನವನೀತಾ ಕಳೆದ 2 ವರ್ಷಗಳಿಂದ ಪತಿಯಿಂದ ದೂರಾಗಿ ಮಗನೊಂದಿಗೆ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು. ಪತ್ನಿಯ ಮನೆಗೆ ನುಗ್ಗಿದ ಆರೋಪಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಇದನ್ನೂ ಓದಿ:Double Murder : ಬೆಂಗಳೂರಿನಲ್ಲಿ ಜೋಡಿ ಕೊಲೆ.. ಹೆಂಡತಿ, ಮಗನ ಕೊಂದು ಪರಾರಿಯಾದ ಪತಿ ಶಂಕೆ

ABOUT THE AUTHOR

...view details