ಕರ್ನಾಟಕ

karnataka

ETV Bharat / state

ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ - mysore latest crime news

ರಮೇಶ್ ಹಾಗೂ ಆರೋಪಿಗಳ ನಡುವೆ ಜಮೀನಿಗೆ ಹೋಗುವ ದಾರಿ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಆರೋಪಿಗಳು ರಮೇಶ್ ಮೇಲೆ ಕೈಮಾಡಿದ್ದಾರೆ. ಕೆನ್ನೆಗೆ ಹೊಡೆದ ಪರಿಣಾಮ ರಮೇಶ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಕೊಲೆಯಲ್ಲಿ ಅಂತ್ಯ.
man murder in mysore

By

Published : Apr 4, 2020, 5:14 PM IST

Updated : Apr 4, 2020, 7:33 PM IST

ಮೈಸೂರು:ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಂಜನಗೂಡು ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ.

ರಮೇಶ್ (54) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ರಮೇಶ್ ಹಾಗೂ ಆರೋಪಿಗಳ ನಡುವೆ ಜಮೀನಿಗೆ ಹೋಗುವ ದಾರಿ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಆರೋಪಿಗಳು ರಮೇಶ್ ಮೇಲೆ ಕೈಮಾಡಿದ್ದಾರೆ. ಕೆನ್ನೆಗೆ ಹೊಡೆದ ಪರಿಣಾಮ ರಮೇಶ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಬಗೆಹರಿಸಬಹುದಾದ ಸಣ್ಣ ಕಾರಣಕ್ಕಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ, ವೃತ್ತ ನಿರೀಕ್ಷಕ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 4, 2020, 7:33 PM IST

ABOUT THE AUTHOR

...view details