ಕರ್ನಾಟಕ

karnataka

ETV Bharat / state

ನೇಣು ಬಿಗಿದುಕೊಂಡು ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ - Mysore

ಮಾನಸ ಗಂಗೋತ್ರಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದರಾಮೇಶ್ವರ (24) ಮೃತ ವಿದ್ಯಾರ್ಥಿ.

Manasa Gangotri student commits suicide
ನೇಣು ಬಿಗಿದುಕೊಂಡು ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ

By

Published : Mar 14, 2021, 10:38 AM IST

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಗಂಗೋತ್ರಿ ಸಮಾಜ‌ಶಾಸ್ತ್ರ ಅಧ್ಯಯನ ವಿಭಾಗದ ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಯಾದಗಿರಿ ಜಿಲ್ಲೆಯವನಾದ ಈತ, ‌ಮಾನಸ ಗಂಗೋತ್ರಿ ಪುರುಷರ ವಿದ್ಯಾರ್ಥಿನಿಲಯದ ಬ್ಲಾಕ್‌ 1ರ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details