ಮೈಸೂರು: ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರದ ಭೂಮಿ ಪೂಜೆ ನಡೆಯುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಐವರು ಅನುಮಾನಾಸ್ಪದ ವ್ಯಕ್ತಿಗಳನ್ನು ಮಂಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಳೆ ರಾಮ ಮಂದಿರ ಭೂಮಿ ಪೂಜೆ: ಮೈಸೂರಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದ ಪೊಲೀಸರು - custody of suspected people
ನಾಳೆ ರಾಮಮಂದಿರ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೈಸೂರಿನ ಮಂಡಿ ಪೊಲೀಸರು ಕೆಲ ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದ ಪೊಲೀಸರು
ಗಾಡ್ವೀನ್, ಮುರ್ತುಜಾ ಖಾನ್, ಮುನೀರ್ ಜಾನ್, ಸತ್ಯನಾರಾಯಣ ಮತ್ತು ಜಾಬೀರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, ಎಲ್ಲಾ ಕಡೆಗಳಲ್ಲೂ ಹದ್ದಿನ ಕಣ್ಣಿಟ್ಟಿದ್ದಾರೆ.
ನಿಯಮ ಮೀರುವವರಿಗೆ ಕಠಿಣ ಕ್ರಮದ ಎಚ್ಚರಿಕೆ ರವಾನಿಸಿದ್ದಾರೆ.