ಕರ್ನಾಟಕ

karnataka

ETV Bharat / state

ಮೊದಲ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ವಿತರಿಸಲು ಸಿದ್ದವಾಗುತ್ತಿವೆ ಮ್ಯಾಂಗೋ ಬರ್ಫಿ - ಚಾಮುಂಡಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ

ಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದದ ರೂಪದಲ್ಲಿ ವಿತರಿಸಲು 25 ಸಾವಿರ ಮ್ಯಾಂಗೋ ಬರ್ಫಿ ತಯಾರಿಸಲಾಗುತ್ತಿದೆ.

ಮ್ಯಾಂಗೋ ಬರ್ಫಿ ತಾಯಾರಿ
ಮ್ಯಾಂಗೋ ಬರ್ಫಿ ತಾಯಾರಿ

By

Published : Jun 22, 2023, 9:59 AM IST

ಮೈಸೂರು: ಮೊದಲ ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ದರ್ಶನಕ್ಕೆ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತದಿಗಳಿಗಾಗಿ ವಿತರಿಸಲು 25 ಸಾವಿರ ಮ್ಯಾಂಗೋ ಬರ್ಫಿ ಸಿದ್ಧವಾಗುತ್ತಿದೆ. ಕಳೆದ 18 ವರ್ಷಗಳಿಂದ ಮೊದಲ ಆಷಾಢ ಶುಕ್ರವಾರದಂದು ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕಾಗಿ ಭಕ್ತರಿಗೆ ವಿತರಿಸಲು 25 ಸಾವಿರ ಮ್ಯಾಂಗೋ ಬರ್ಫಿ ತಯಾರಾಗುತ್ತಿದೆ.

ನಗರದ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 8 ಬಾಣಸಿಗರ ತಂಡದಿಂದ ಬರ್ಫಿ ತಯಾರಿಕೆ ಮಂಗಳವಾರದಿಂದ ಶುರುಮಾಡಲಾಗಿದ್ದು, ಮೂರು ದಿನಗಳಲ್ಲಿ 25 ಸಾವಿರ ಭರ್ಪಿ ತಯಾರಿಕೆ ಕಾರ್ಯ ಪೂರ್ಣಗೊಳ್ಳಲಿದೆ. 30 ಕೆಜಿ ಮೈದಾ, 200 ಕೆಜಿ ಹಾಲುಕೋವಾ, 400 ಕೆಜಿ ಸಕ್ಕರೆ, 100 ಲೀಟರ್ ಮಾವಿನ ಹಣ್ಣಿನ ಪಲ್ಫ್, 3 ಕೆಜಿ ಪಿಸ್ತಾ, 5 ಕೆಜಿ ಬಾದಾಮಿ, 2 ಟಿನ್ ನಂದಿನಿ ತುಪ್ಪ, 30 ಕೆಜಿ ನಂದಿನಿ ಮಿಲ್ಕ್ ಪೌಡರ್ ಬಳಸಿ ಬರ್ಫಿ ತಯಾರಿಸಲಾಗುತ್ತಿದೆ. ಇದರ ಜವಾಬ್ದಾರಿಯನ್ನು ಆದಿತ್ಯ ಕೇಟರರ್ಸ್ ವಹಿಸಿಕೊಂಡಿದೆ.

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವ್ಯವಸ್ಥೆ: ಬೆಟ್ಟದ ಪಾರ್ಕಿಂಗ್ ಜಾಗದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಪ್ರಸಾದ ವಿತರಣೆ ಆರಂಭವಾಗಲಿದೆ. ಅಂದು ಬೆಳಗ್ಗೆ ಉಪಹಾರಕ್ಕೆ ಫೈನಾಪಲ್ ಕೇಸರ್‍ಬಾತ್, ಪೊಂಗಲ್, ರವಾ ವಾಂಗೀಬಾತ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ಊಟಕ್ಕೆ ಕೋಸಂಬರಿ, ಪಲ್ಯಾ, ಬಿಸಿಬೇಳೇಬಾತ್, ಅನ್ನ ಸಾಂಬಾರ್, ಹಪ್ಪಳ, ಮೊಸರು ಹಾಗೂ ಮ್ಯಾಂಗೋಬರ್ಫಿ ವಿತರಿಸಲಾಗುತ್ತದೆ. ಇದಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಸೇವಾಕರ್ತರಾದ ಅರುಣ್‍ಕುಮಾರ್ ಮಾತನಾಡಿ,ಕಳೆದ 20 ವರ್ಷಗಳಿಂದ ಮೊದಲ ಆಷಾಢ ಶುಕ್ರವಾರದಂದು
ಪ್ರಸಾದ ವಿತರಣೆ ಮಾಡಲಾಗುತ್ತಿದೆ. 18 ವರ್ಷಗಳಿಂದ ಸಿಹಿ ವಿತರಣೆ ಮಾಡಲಾಗುತ್ತಿದೆ. ಪ್ರತಿ ವರ್ಷವೂ ವಿಶೇಷ ಸಿಹಿ ವಿತರಿಸಲಾಗುತ್ತಿದ್ದು, ಈ ಬಾರಿ ಮ್ಯಾಂಗೋ ಬರ್ಫಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ

ಖಾಸಗಿ ವಾಹನ ಸಂಚಾರ ನಿರ್ಬಂಧ :ಜೂ.23 ರಿಂದ ಜುಲೈ 14ರ ವರೆಗೆ ಆಷಾಢ ಶುಕ್ರವಾರ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುವುದರಿಂದ ಸುಗಮ ಸಂಚಾರದ ಹಿತದೃಷ್ಟಿಯಿಂದ ಖಾಸಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರು ವಾಹನಗಳನ್ನು ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಿ, ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಉಚಿತ ಕೆಎಸ್​ಆರ್​ಟಿಸಿ ಬಸ್‌ಗಳಲ್ಲಿ ದೇವಸ್ಥಾನಕ್ಕೆ ಬರುವಂತೆ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಳಗಿನ ಜಾವ 3 ರಿಂದ ರಾತ್ರಿ 10ರ ವರೆಗೆ ಉಚಿತ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ. ಆಷಾಢ ಶುಕ್ರವಾರದ ದಿನಗಳಂದು ಮತ್ತು ವರ್ಧಂತಿ ದಿನದಂದು ತಾವರೆಕಟ್ಟೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್‌ವ್ಯಾಲಿ ರಸ್ತೆ ಮೂಲಕ ಚಾಮುಂಡಿಬೆಟ್ಟಕ್ಕೆ ಹೋಗುವ (ಶಿಷ್ಟಾಚಾರವಿರುವ ಗಣ್ಯರು ಮತ್ತು ಅತಿಗಣ್ಯರ ವಾಹನಗಳು ಮತ್ತು ಸಾರಿಗೆ ಸಂಸ್ಥೆಯ ವಾಹನಗಳನ್ನು ಹೊರತುಪಡಿಸಿ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ:ಆಷಾಢ ಶುಕ್ರವಾರ ದಿನ ಚಾಮುಂಡಿಬೆಟ್ಟಕ್ಕೆ ನೋ ವೆಹಿಕಲ್.. ದೇವಸ್ಥಾನಕ್ಕೆ ಕೆಎಸ್​ಆರ್​ಟಿಸಿಯಿಂದ ಉಚಿತ ಬಸ್​ ವ್ಯವಸ್ಥೆ

ABOUT THE AUTHOR

...view details