ಕರ್ನಾಟಕ

karnataka

ETV Bharat / state

ತನ್ವೀರ್​ ಸೇಠ್​​​ ಮೇಲಿನ ಹಲ್ಲೆ ಪ್ರಕರಣ: ಹಲವರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ ಪೊಲೀಸರು - ನಗರ ಪೋಲಿಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ

ಶಾಸಕ ತನ್ವೀರ್ ಸೇಠ್​​ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಸೇರಿದಂತೆ ಹಲವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಪೊಲೀಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ ಆಸ್ಪತ್ರೆಯ ಬಳಿ ಹೇಳಿಕೆ ನೀಡಿದ್ದಾರೆ.

ನಗರ ಪೋಲಿಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ

By

Published : Nov 18, 2019, 2:20 PM IST

ಮೈಸೂರು:ಶಾಸಕ ತನ್ವೀರ್ ಸೇಠ್​​ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಸೇರಿದಂತೆ ಹಲವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಪೋಲಿಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ ಆಸ್ಪತ್ರೆಯ ಬಳಿ ಹೇಳಿಕೆ ನೀಡಿದ್ದಾರೆ.

ನಗರ ಪೊಲೀಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ

ಇಂದು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದೇವೆ. ಪ್ರಮುಖ ಆರೋಪಿ ಉದಯಗಿರಿ ನಿವಾಸಿಯಾಗಿದ್ದು, ಮರಗೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ ಎಂದರು.

ಈ ವ್ಯಕ್ತಿಯೇ 2-3 ಬಾರಿ ಹಲ್ಲೆಗೆ ಪ್ರಯತ್ನ ನಡೆಸಿದ್ದ ಎಂಬ ವಿಚಾರದಲ್ಲೂ ತನಿಖೆ ನಡೆಯುತ್ತಿದ್ದು, ಹಲ್ಲೆ ನಡೆಸಿದ ವ್ಯಕ್ತಿಯ ಹಿನ್ನೆಲೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸುತ್ತಿದ್ದೇವೆ. ವಿಚಾರಣೆಯ ನಂತರ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದರು.

ABOUT THE AUTHOR

...view details