ಮೈಸೂರು:ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೀರಭದ್ರ ಎಂಬುವರ ಪತ್ನಿ ದಿವ್ಯಾ (26) ಮೃತ ದುರ್ದೈವಿ. ಎಚ್.ಡಿ. ಕೋಟೆ ತಾಲೂಕಿನ ಮಾದಾಪುರ ಗ್ರಾಮದ ನಿವಾಸಿ ದಿವ್ಯಾಳನ್ನ 2 ವರ್ಷಗಳ ಹಿಂದೆ ಮಲ್ಕುಂಡಿ ಗ್ರಾಮದ ವೀರಭದ್ರನಿಗೆ ವಿವಾಹ ಮಾಡಿಕೊಡಲಾಗಿತ್ತು. ಇಬರಿಬ್ಬರ ದಾಂಪತ್ಯಕ್ಕೆ 1 ವರ್ಷದ ಹೆಣ್ಣು ಮಗುವಿದೆ.
ವರದಕ್ಷಿಣೆ ಕಿರುಕುಳದಿಂದ ಪತಿ ವೀರಭದ್ರ ಮತ್ತು ಕುಟುಂಬಸ್ಥರು ಹಲ್ಲೆ ಮಾಡಿ ನೇಣು ಹಾಕಿದ್ದಾರೆ ಎಂದು ದಿವ್ಯಾಳ ಪೋಷಕರ ಆರೋಪವಾಗಿದೆ. ಈ ಸಂಬಂಧ ಮೃತ ದಿವ್ಯಾಳ ಸಹೋದರ ರಘು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೈಸೂರು: ಗೃಹಿಣಿ ಅನುಮಾನಾಸ್ಪದ ಸಾವು - ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಮಾದಾಪುರ ಗ್ರಾಮದ ವಿವಾಹಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಪ್ರಕರಣ ಎಂದು ಆರೋಪಿಸಿದ್ದಾರೆ.
![ಮೈಸೂರು: ಗೃಹಿಣಿ ಅನುಮಾನಾಸ್ಪದ ಸಾವು mysore latest crime news](https://etvbharatimages.akamaized.net/etvbharat/prod-images/768-512-10203267-thumbnail-3x2-mysore.jpg)
ಗೃಹಿಣಿ ಅನುಮಾನಾಸ್ಪದ ಸಾವು