ಮೈಸೂರು: ಜಿಲ್ಲಾಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಆಯೋಜಿಸಿರುವ ಸಪ್ತಪದಿ ಉಚಿತ ಸಾಮೂಹಿಕ ಸರಳ ವಿವಾಹವನ್ನು 2022 ರ ಮೇ 25 ರಂದು ನಂಜನಗೂಡಿನ ಶ್ರಿಕಂಠೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ತಿಳಿಸಿದ್ದಾರೆ.
ಸಾಮೂಹಿಕ ವಿವಾಹವನ್ನು ಮೇ 25 ರ ಬುಧವಾರ ಬೆಳಗ್ಗೆ 10. 55 ರಿಂದ 11:40 ರವರೆಗೆ ಕಟಕ ಶುಭ ಲಗ್ನ ದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದು, ವಧು- ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನೂ ದೇವಾಲಯ ಆಡಳಿತ ಮಂಡಳಿ ಮಾಡುತ್ತದೆ. ವಿವಾಹದಲ್ಲಿ ಪಾಲ್ಗೊಳ್ಳುವ ವಧು-ವರರು 2022ರ ಮೇ 13 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.