ಮೈಸೂರು :ದಸರಾ ಮಹೋತ್ಸವ 2020 ರ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಸಚಿವರಾದ ಸಿ.ಟಿ.ರವಿ ಉಪಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಅದರ ಮುಖ್ಯಾಂಶಗಳು ಇಂತಿವೆ.
- ಕೋವಿಡ್ ಹಿನ್ನೆಲೆ ಈ ಬಾರಿ ನಾಡಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧಾರ
- ಅಕ್ಟೋಬರ್ 2 ರ ಮಧ್ಯಾಹ್ನ 12.18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ
- ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜ ಪಯಣ ಸಮಾರಂಭ ಇರಲ್ಲ.
- ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನ
- ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
- ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರಿಂದ ದಸರಾ ಉದ್ಘಾಟನೆ, ಉಳಿದವರಿಗೆ ಸನ್ಮಾನ
- ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪ ಬಂದಿದೆ
- 2020ರ ಅಕ್ಟೋಬರ್ 17 ರಂದು ಬೆಳಿಗ್ಗೆ 7.45 ರಿಂದ 8.15 ರೊಳಗಿನ ಶುಭ ಮುಹೂರ್ತದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
- ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ.
- ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ
- ಜಂಬೂ ಸವಾರಿ ವೀಕ್ಷಣೆಗೆ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ
- ಆದ್ರೆ, ಎಷ್ಟು ಜನರನ್ನು ಸೇರಿಸಲು ಅನುಮತಿ ಸಿಗುತ್ತದೆಯೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸಲಾಗುವುದು.
- ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಸಲಾಗುವುದು.
- ಈ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು
- ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
- ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
- ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು.
- ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲಾಗುವುದು.