ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಿದ್ದು, ಇದನ್ನು ಕಂಟ್ರೋಲ್ ಮಾಡುವ ದೃಷ್ಟಿಯಿಂದ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚಿಸಿರುವುದಾಗಿ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಚರ್ಚೆ ಮಾಡಿದ ಬಳಿಕ ಮಾತನಾಡಿದ ಅವರು, ನಾವು ಕೋವಿಡ್ ಕಡಿಮೆ ಮಾಡಲು ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ. ಆದ್ದರಿಂದ ಇದುವರೆಗೆ ದಸರಾ ಸಿದ್ಧತೆಯ ಬಗ್ಗೆ ಗಮನ ಹರಿಸಲು ಸಾಧ್ಯವಾಗಿಲ್ಲ. ಸಂಪುಟ ಸಭೆಯಲ್ಲಿ ಇದೇ ತಿಂಗಳ 20ರಂದು ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.