ಮೈಸೂರು:ಡ್ರಗ್ಸ್ ಜಾಲದಲ್ಲಿ ಇರುವವರು ಎಷ್ಟೇ ಪ್ರಭಾವಿಗಳಾಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಡ್ರಗ್ಸ್ ಜಾಲದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬಿ.ಸಿ. ಪಾಟೀಲ್ - ಮೈಸೂರು
ಸಿನಿಮಾ ನಟರಾಗಲಿ, ರಾಜಕಾರಣಿಗಳಾಗಲಿ, ಅಧಿಕಾರಿಗಳೇ ಆಗಲಿ ಯಾರು ಈ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದರೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಇಂದು ಕೃಷಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲು ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿನಿಮಾ ನಟರಾಗಲಿ, ರಾಜಕಾರಣಿಗಳಾಗಲಿ, ಅಧಿಕಾರಿಗಳಾಗಲಿ. ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಸಮಾಜ ಹಾಳಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ ಕಾನೂನು ಕ್ರಮ ಜರುಗಿಸುತ್ತದೆ ಎಂದರು.
ನಾನು ಸಿನಿಮಾರಂಗಕ್ಕೆ ಬಂದ ಸಂದರ್ಭದಲ್ಲಿ ಡ್ರಗ್ಸ್ ಬಗ್ಗೆ ಕೇಳಿರಲಿಲ್ಲ. ಈಗ ಬೃಹತ್ ಜಾಲವೇ ಇರುವ ಶಂಕೆ ಮೂಡಿದೆ. ಇಂತಹ ವಿಚಾರಗಳು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಸರ್ಕಾರ ಈ ಡ್ರಗ್ಸ್ ಮೂಲವನ್ನು ಕಿತ್ತುಹಾಕಲಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಬಿ ಸಿ ಪಾಟೀಲ್ ಸ್ಪಷ್ಟಪಡಿಸಿದರು.