ಮೈಸೂರು:ನೆರೆ ಪೀಡಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಸ್ಪಂದಿಸಿ ಕೆಲಸ ಮಾಡುತ್ತಿದೆ. ಟೀಕೆ ಮಾಡುವವರಿಗೆ ಉತ್ತರ ಕೊಡೋಕಾಗಲ್ಲ. ವಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬಂತೆ ಅವರನ್ನು ಮೆಚ್ಚಿಸೋಕಾಗಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಪರಿಹಾರ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಪರಿಹಾರವನ್ನು ಘೋಷಣೆ ಮಾಡಿದ್ದೇವೆ. ₹3500 ಸಾವಿರ ಕೊಡುತ್ತಿದ್ದ ಪರಿಹಾರವನ್ನು ₹10000 ಸಾವಿರಕ್ಕೆ ಏರಿಕೆ ಮಾಡಿದ್ದೇವೆ. ಶೇ. 98% ಪರಿಹಾರ ತಲುಪಿದೆ. ಟೀಕೆಗಳಿಗೆ ಉತ್ತರ ಕೊಡಲುವುದಿಲ್ಲ ಎಂದರು.