ಕರ್ನಾಟಕ

karnataka

ETV Bharat / state

ರಾಜ್ಯಪಾಲರಿಗೆ ಪತ್ರ: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಈಶ್ವರಪ್ಪ - ರಾಜ್ಯಪಾಲರಿಗೆ ಪತ್ರ ಬರೆದ ಸಚಿವ ಈಶ್ವರಪ್ಪ

ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು, ಸ್ವಪಕ್ಷದವರ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಈಶ್ವರಪ್ಪ ಮಾಧ್ಯಮಗಳ ಪ್ರಶ್ನೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

Minister Eshwarappa denied to comment to med
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ಈಶ್ವರಪ್ಪ

By

Published : Apr 1, 2021, 5:08 PM IST

ಮೈಸೂರು : ಅನುದಾನ ಹಂಚಿಕೆ ತಾರತಮ್ಯ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಮತ್ತು ಬಿಜೆಪಿ ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಲು ಸಚಿವ ಈಶ್ವರಪ್ಪ ನಿರಾಕರಿಸಿದರು.

ನಗರದ ಖಾಸಗಿ ಹೋಟೆಲ್​ಗೆ ಆಗಮಿಸಿದ ಅವರು, ಸಿಎಂ ವಿರುದ್ಧ ಅಸಮಾಧಾನ ಹಾಗೂ ಸಿಡಿ ವಿಚಾರವಾಗಿ ಮಾಧ್ಯಮದವರು ಮಾತನಾಡಿಸಲು ಮುಂದಾದಾಗ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವ ಈಶ್ವರಪ್ಪ

ಇದನ್ನೂ ಓದಿ : ಈಶ್ವರಪ್ಪ ವಿರುದ್ಧ ಗರಂ ಆದ ಶಾಸಕರು: ಹೈಕಮಾಂಡ್​ಗೆ ದೂರು ನೀಡಲು ನಿರ್ಧಾರ

ರಾಜ್ಯಪಾಲರಿಗೆ ದೂರು ನೀಡಿರುವ ಸಚಿವ ಈಶ್ವರಪ್ಪ ನಡೆಯನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಹಲವು ಶಾಸಕರು ಖಂಡಿಸಿದ್ದಾರೆ. ರಾಜ್ಯಪಾಲರ ಅಂಗಳಕ್ಕೆ ಪ್ರಕರಣವನ್ನು ಕೊಂಡೊಯ್ದಿದ್ದು ಸರಿಯಲ್ಲ. ಈಶ್ವರಪ್ಪ ನಿಲುವು ಪ್ರಶ್ನಿಸಿ ನಾವೆಲ್ಲಾ ಹೈಕಮಾಂಡ್ ಮೊರೆ ಹೋಗುತ್ತೇವೆ ಎಂದಿದ್ದಾರೆ.

ABOUT THE AUTHOR

...view details