ಮೈಸೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ನಡುವಿನ ಊಹಾಪೋಹ ಸುದ್ದಿಗಳಿಗೆ ಉತ್ತರ ನೀಡುವುದಿಲ್ಲವೆಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕೋಟೆ ಆಂಜನೇಯ ದೇವಾಲಯದ ಬಳಿ ರೈತ ದಸರಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಎಲ್ಲರೂ ಒಟ್ಟಾಗಿ ಒಳ್ಳೆಯ ಆಡಳಿತವನ್ನು ನೀಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ನಮ್ಮ ನಾಯಕರು ಯಡಿಯೂರಪ್ಪ ಎಂದು ಹೇಳಿದ್ದಾರೆ ಎಂದರು.
ರೈತ ದಸರಾ ಮೆರವಣಿಗೆಗೆ ಚಾಲನೆ ನಾವೆಲ್ಲರೂ ಬಿಎಸ್ವೈ ನೇತೃತ್ವದಲ್ಲೇ ಪಕ್ಷವನ್ನು ಸಂಘಟಿಸುತ್ತೇವೆ. 15 ಕ್ಷೇತ್ರಗಳ ಉಪ ಚುನಾವಣೆಗಳಲ್ಲೂ ಗೆಲ್ಲುತ್ತೇವೆ. ಕಟೀಲ್ ಹಾಗೂ ಸಿಎಂ ನಡುವಿನ ಗೊಂದಲದ ಊಹಾಪೋಹಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವ ಪೂಜಾರಿ ಸ್ಪಷ್ಟಪಡಿಸಿದರು.
ಇನ್ನು ಸಂಸದ ಶ್ರೀನಿವಾಸ್ ಪ್ರಸಾದ್ ದಸರಾ ಅದ್ಧೂರಿ ಆಚರಣೆ ಬಗ್ಗೆ ವಿರೋಧ ವ್ಯಕ್ತಪಡಿಸಿ ದಸರಾ ಕಾರ್ಯಕ್ರಮದಿಂದ ದೂರ ಉಳಿದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಹಲವು ಹಿರಿಯರು ತಮ್ಮದೇ ಆದ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಕೊನೆಯಲ್ಲಿ ಎಲ್ಲರೂ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ದಸರಾ ಎನ್ನುವುದು ನಾಡಹಬ್ಬವಾಗಿದ್ದು, ಎಲ್ಲರೂ ಒಟ್ಟಾಗಿ ಸೇರಿ ಆಚರಿಸೋಣ, ಈ ಸಂದರ್ಭದಲ್ಲಿ ಟೀಕೆ ಟಿಪ್ಪಣಿಗಳಿಗೆ ಉತ್ತರ ಕೊಡುವುದು ಸರಿಯಲ್ಲ ಎಂದರು.