ಮೈಸೂರು: ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದ, ತಪ್ಪೇನಿಲ್ಲ ಎಂದರು.
ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ: ಸಚಿವ ಮುರುಗೇಶ್ ನಿರಾಣಿ
ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗ್ತೀವಿ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಸಚಿವ ಮುರುಗೇಶ್ ನಿರಾಣಿ
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಸಿಎಂ ಪರಮಾಧಿಕಾರ. ರಾಜ್ಯ ಬಿಜೆಪಿ ಅಧ್ಯಕ್ಷರು, ಕೇಂದ್ರದ ನಾಯಕರು ತೀರ್ಮಾನ ಮಾಡ್ತಾರೆ. ಈಗಾಗಲೇ ನಮಗೆ ಜವಾಬ್ದಾರಿ ನೀಡಿದ್ದಾರೆ. ಅದರಲ್ಲಿ ಉತ್ತಮ ಫರ್ಫಾಮೆನ್ಸ್ ನೀಡೋದು ನಮ್ಮ ಕೆಲಸ ಎಂದರು.
ಇದನ್ನೂಓದಿ:ಚಿಕ್ಕಮಗಳೂರು: ಬೆಳಗಾವಿ ಮೂಲದ ಸೂಪರ್ ವೈಸರ್ ಆತ್ಮಹತ್ಯೆಗೆ ಶರಣು