ಕರ್ನಾಟಕ

karnataka

ETV Bharat / state

ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ: ಸಚಿವ ನಾರಾಯಣ ಗೌಡ - ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ

ಸದ್ಯದ ಪರಿಸ್ಥಿತಿ ನೋಡಿದರೆ ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸ್ಥಾನ ಗೆಲ್ಲುತ್ತಿದ್ದ ಬಿಜೆಪಿ ಗ್ರಾ.ಪಂ ಚುನಾವಣೆಯಲ್ಲಿ 750-800 ಸ್ಥಾನ ಗೆದ್ದಿದೆ. ಇದನ್ನು ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಗೊತ್ತಾಗುತ್ತದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ ಹೇಳಿದರು.

ಸಚಿವ ನಾರಾಯಣಗೌಡ
Minister Narayana Gowda

By

Published : Feb 14, 2021, 12:13 PM IST

ಮೈಸೂರು:ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ ನಿಮಗೆ ಹಾಗೆ ಅನ್ನಿಸುವುದಿಲ್ಲವಾ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ ಪ್ರತಿಕ್ರಿಯಿಸಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಚಿವ ನಾರಾಯಣ ಗೌಡ ಪ್ರತಿಕ್ರಿಯೆ

ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸ್ಥಾನ ಗೆಲ್ಲುತ್ತಿದ್ದ ಬಿಜೆಪಿ ಗ್ರಾ.ಪಂ ಚುನಾವಣೆಯಲ್ಲಿ 750-800 ಸ್ಥಾನ ಗೆದ್ದಿದೆ. ಇದನ್ನು ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಗೊತ್ತಾಗುತ್ತಿದೆ. ಕೆಳ ಹಂತದಿಂದ ಪಕ್ಷ ಸಂಘಟಿಸುವ ಕೆಲಸ ನಡೆಯುತ್ತಿದೆ. ನಾನು ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರನ್ನು ದೂರುವುದಿಲ್ಲ. ನಮ್ಮ ಪಕ್ಷದ ಬಲವರ್ಧನೆಗೆ ಬೇಕಾದ ಕೆಲಸ ಮಾಡುತ್ತಿದ್ದೇವೆ ಎಂದರು.

ಬಿಜೆಪಿಗೆ ಶಾಸಕ ಎಂ.ಶ್ರೀನಿವಾಸ್ ಸೆಳೆಯುವ ಯತ್ನ ವಿಚಾರವಾಗಿ ಮಾತನಾಡಿ, ನಾವು ಯಾರನ್ನೂ ಸೆಳೆಯುವ ಪ್ರಯತ್ನ ಮಾಡಿಲ್ಲ. ಒಂದಿಬ್ಬರು ಎಂಎಲ್ಎಗಳು ಬಿಟ್ಟರೆ ಉಳಿದವರು ನಮ್ಮ ಜೊತೆಗಿದ್ದಾರೆ. ಬಿಜೆಪಿ ಮುನ್ನಡೆಸಲು ಜೊತೆಯಾಗಿ ಬಂದವರನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಅದನ್ನು ನಾನು ಈಗ ಬಹಿರಂಗ ಮಾಡಲ್ಲ. ಎಲ್ಲವೂ ಒಳ್ಳೆಯದಾದ ನಂತರ ನಿಮ್ಮ ಬಳಿ ಹೇಳುತ್ತೀವಿ ಎನ್ನುವ ಮೂಲಕ ಮಂಡ್ಯದಲ್ಲಿ ಆಪರೇಷನ್ ಮಾಡುವ ಮಾಡುವ ಬಗ್ಗೆ ಸುಳಿವು ನೀಡಿದರು.

ಓದಿ: ವೈವಾಹಿಕ ಬದುಕಿಗೆ ಕಾಲಿಟ್ಟ ಐಶ್ವರ್ಯಾ- ಅಮಾರ್ಥ್ಯ: ಯುವ ಜೋಡಿಯ ಕಲ್ಯಾಣಕ್ಕೆ ಗಣ್ಯರು ಸಾಕ್ಷಿ

ಬೆಂಗಳೂರಿನಲ್ಲಿ ಒಂದೂವರೆ ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಬೆಂಗಳೂರನ್ನು ಬಿಟ್ಟರೆ ಮೈಸೂರು, ಹುಬ್ಬಳ್ಳಿ ಮುಂಚೂಣಿಯಲ್ಲಿವೆ. ಪ್ರತಿ ಜಿಲ್ಲೆಗಳಲ್ಲೂ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಕೆಲಸ ಆಗಲಿದೆ‌ ಎಂದು ಸಚಿವರು ಹೇಳಿದರು.

ಪಿಪಿಪಿ ಯೋಜನೆಯಡಿ ಕ್ರೀಡಾಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೇವೆ. ಈ ಬಾರಿ ಬಜೆಟ್​​ನಲ್ಲಿ ಕ್ರೀಡಾ ಇಲಾಖೆಗೂ ಸಾಕಷ್ಟು ಅನುದಾನ ಸಿಗಲಿದೆ. ಹಾಸ್ಟೆಲ್​​​ಗಳು ಸೇರಿದಂತೆ ಕ್ರೀಡಾ ಇಲಾಖೆಯ ಆಮೂಲಾಗ್ರ ಬದಲಾವಣೆಗೆ ಪ್ರಯತ್ನಿಸುತ್ತೇನೆ ಎಂದರು.

ABOUT THE AUTHOR

...view details