ಮೈಸೂರು: ಇಬ್ಬರು ಪಕ್ಷೇತರರಿಗೆ ಮಾತ್ರ ಸಚಿವ ಸ್ಥಾನ ಕೊಡಲು ಎರಡು ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ. ಅದನ್ನು ಬಿಟ್ಟರೆ ಸಚಿವ ಸಂಪುಟದ ವಿಸ್ತರಣೆ ಇಲ್ಲ ಎಂದು ಸಚಿವ ಸಿ.ಎಸ್.ಪುಟ್ಟರಾಜು ಈ ಟಿವಿ ಭಾರತ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಇಂದು ಚಾಮುಂಡಿ ಬೆಟ್ಟಕ್ಕೆ ರಾಜ್ಯಸಭಾ ಸದಸ್ಯ ಕುಪ್ಪರೆಡ್ಡಿ ಜೊತೆ ಆಗಮಿಸಿದ ಸಚಿವ ಸಿ.ಎಸ್.ಪುಟ್ಟರಾಜು, ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಈ ಟಿವಿ ಭಾರತ್ ಜೊತೆ ಮಾತನಾಡಿ, 12 ರಂದು ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಇಬ್ಬರು ಪಕ್ಷೇತರರಿಗೆ ಮಾತ್ರ ಸಚಿವ ಸ್ಥಾನ ನೀಡಲು ಎರಡು ಪಕ್ಷಗಳು ತಿರ್ಮಾನಿಸಿವೆ. ಅದನ್ನು ಬಿಟ್ಟರೆ ಇನ್ಯಾರಿಗೂ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಅವರಿಗೆ ಹೊಟ್ಟೆ ಉರಿ, ಬಿಜೆಪಿ ಜೊತೆ ಸರ್ಕಾರ ಮಾಡಿದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಅವರಿಗೆ ಒಳ್ಳೆಯ ಹೆಸರು ಬಂದಿತ್ತು. ಈಗ ಆ ಹೆಸರನ್ನು ಮತ್ತೆ ಎಲ್ಲಿ ಗಳಿಸಿಬಿಡುತ್ತಾರೊ ಎಂಬ ಭಯ ಬಿಜೆಪಿಯಲ್ಲಿ ಶುರುವಾಗಿದೆ. ಆದ್ದರಿಂದ ಈ ರೀತಿ ಹೇಳುತ್ತಿದ್ದಾರೆ ಎಂದರು.
ಇಬ್ಬರು ಪಕ್ಷೇತರರಿಗೆ ಮಾತ್ರ ಸಚಿವ ಸ್ಥಾನ ಪಕ್ಷೇತರರಿಗೆ ಸಚಿವ ಸ್ಥಾನಕೊಟ್ಟರೆ ಭಿನ್ನಮತ ಹೊತ್ತಿ ಉರಿಯುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ 1 ವರ್ಷಗಳಿಂದಲೂ ಇದೇ ಮಾತನ್ನೂ ಯಡಿಯೂರಪ್ಪ ಹೇಳಿಕೊಂಡು ಬರುತ್ತಿದ್ದಾರೆ ಯಾವ ಬೆಂಕಿಯನ್ನು ಹತ್ತಿಸಲು ಅವರಿಗೆ ಆಗಲಿಲ್ಲ. ಯಾವ ಬೆಂಕಿಯು ಉರಿಯಲಿಲ್ಲ ಎಂದು ವ್ಯಂಗ್ಯವಾಡಿದರು.