ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಹೇಳಿಕೆಗೆ ಉತ್ತರ ಕೊಡುವ ಅಗತ್ಯ ಇಲ್ಲ: ಸಚಿವ ಎಸ್ ಟಿ ಸೋಮಶೇಖರ್ - ಸಿದ್ದರಾಮಯ್ಯ ಹೇಳಿಕೆಗೆ ಎಸ್​. ಟಿ ಸೋಮಶೇಖರ್ ತಿರುಗೇಟು

ಕಾಂಗ್ರೆಸ್ ಪಕ್ಷದವರಿಗೆ ಮಾಡಲು ಬೇರೆ ಕೆಲಸವಿಲ್ಲ. ಬೆಳಗ್ಗೆ ಎದ್ದರೆ ಕೆಸರೆರಚಾಟ ಮಾಡುವುದು ಅವರ ಕೆಲಸ.‌ ನಮಗೆ ಬೇಕಾದಷ್ಟು ಕೆಲಸವಿದೆ. ಸಿಎಂ ಬೊಮ್ಮಾಯಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.‌ ಕೆಲಸವಿಲ್ಲದ ಕಾಂಗ್ರೆಸ್ ಪಕ್ಷದವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

minister-s-t-somashekhar
ಸಚಿವ ಎಸ್ ಟಿ ಸೋಮಶೇಖರ್

By

Published : Jan 26, 2022, 10:04 PM IST

ಮೈಸೂರು: ಜಿಜೆಪಿಯ ಸಚಿವರು ಹಾಗು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹಾಗು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಎಸ್​. ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.

ಬುಧವಾರ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಚಿವರು ಸುಮ್ಮನೆ ಹಾವಿನ ಬುಟ್ಟಿ‌ ಹಿಡಿದುಕೊಂಡು ಹಾವು ಬಿಡುತ್ತೇನೆ, ಹಾವು ಬಿಡುತ್ತೇನೆ ಎನ್ನುತ್ತಾರೆ. ಹಾವಿನ ಬುಟ್ಟಿ ತೆಗೆದರೆ ಗೊತ್ತಾಗುತ್ತದೆ. ಅದು ಬುಸ್ ಆಗುತ್ತದೋ ಅಥವಾ ಟುಸ್ ಆಗುತ್ತದೋ ಎಂದು ವ್ಯಂಗ್ಯವಾಡಿದರು.

ಸಚಿವ ಎಸ್ ಟಿ ಸೋಮಶೇಖರ್ ಮಾತನಾಡಿದರು

ಇತ್ತೀಚಿಗೆ ಎಲ್ಲರಿಗೂ ಒಂದು ಚಟವಾಗಿದೆ. ರಮೇಶ್ ಜಾರಕಿಹೊಳಿ ಸಹ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದು ಎಲ್ಲರಿಗೂ ಒಂದು ಹ್ಯಾಬಿಟ್ ಆಗಿದ್ದು, ಇದಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಕಾಂಗ್ರೆಸ್ ಪಕ್ಷದವರಿಗೆ ಮಾಡಲು ಬೇರೆ ಕೆಲಸವಿಲ್ಲ. ಬೆಳಗ್ಗೆ ಎದ್ದರೆ ಕೆಸರೆರಚಾಟ ಮಾಡುವುದು ಅವರ ಕೆಲಸ.‌ ನಮಗೆ ಬೇಕಾದಷ್ಟು ಕೆಲಸವಿದೆ. ಸಿಎಂ ಬೊಮ್ಮಾಯಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.‌ ಕೆಲಸವಿಲ್ಲದ ಕಾಂಗ್ರೆಸ್ ಪಕ್ಷದವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದರು.

ಅಧಿಕಾರಿಗಳ ಸಭೆ ನಡೆಸಿದ ಸಚಿವರು..ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಉನ್ನತ ಅಧಿಕಾರಿಗಳು ಸಭೆ ನಡೆಸಿ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ನಂತರ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದರು.

ಓದಿ:ನಾಯಕತ್ವ ಬದಲಾವಣೆ ಶುದ್ಧ ಸುಳ್ಳು, ಇದು ಮಾಧ್ಯಮಗಳ ಸೃಷ್ಟಿ: ಸಿಎಂ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details