ಮೈಸೂರು: ಜಿಲ್ಲೆ ಸದ್ಯ ಕೊರೊನಾ ಮುಕ್ತವಾಗಿದೆ. ಬಹುಬೇಗ ಇಡೀ ರಾಜ್ಯವನ್ನೂ ಕೊರೊನಾ ಮಹಾಮಾರಿಯಿಂದ ಪಾರು ಮಾಡು ಎಂದು ನಂಜುಂಡೇಶ್ವರನಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ತಿಳಿಸಿದರು.
ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಹಾಗೂ ನಂಜುಂಡೇಶ್ವರನ ದಯೆಯಿಂದ ಮೈಸೂರು ಜಿಲ್ಲೆ ಕೊರೊನಾ ಮುಕ್ತವಾಗಿದೆ. ಹೀಗೆಯೇ ರಾಜ್ಯದ ಜನರನ್ನೂ ಪಾರು ಮಾಡುವಂತೆ ಆ ನಂಜುಂಡೇಶ್ವರನಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.