ಕರ್ನಾಟಕ

karnataka

ETV Bharat / state

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ - ನಾಡಹಬ್ಬ ದಸರಾ ಉದ್ಘಾಟನೆ

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ. ಸೆ.26ರಂದು ರಾಷ್ಟ್ರಪತಿಗಳಿಂದ ನಾಡಹಬ್ಬ ದಸರಾ ಉದ್ಘಾಟನೆ.

ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಆಹ್ವಾನ
ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಆಹ್ವಾನ

By

Published : Sep 22, 2022, 6:54 PM IST

Updated : Sep 22, 2022, 7:13 PM IST

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಇಂದು ಆಹ್ವಾನ ನೀಡಿದರು. ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇದೇ ಪ್ರಥಮ ಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ರಾಜ್ಯ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.

(ಓದಿ: ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ)

ರಾಷ್ಟ್ರಪತಿ ಅವರಿಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.

(ಇದನ್ನೂ ಓದಿ: ಮೈಸೂರು ದಸರಾ 2022: ಅರಮನೆ ಆವರಣದಲ್ಲಿ ಏಳು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ)

Last Updated : Sep 22, 2022, 7:13 PM IST

ABOUT THE AUTHOR

...view details