ಮೈಸೂರು: ಮಳೆ ಹಾನಿಯಿಂದ ತೊಂದರೆಗೆ ಒಳಗಾದವರಿಗೆಲ್ಲ ಸೂಕ್ತ ರೀತಿಯಲ್ಲಿ ಪರಿಹಾರ ವಿತರಣೆ ಮಾಡಬೇಕು. ಮನೆ ಹಾನಿ, ಬೆಳೆ ಹಾನಿ ಆದವರಿಗೆ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಅಲ್ಲದೇ ಪರಿಹಾರ ವಿತರಣೆಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದೂ ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. 3,200 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 2,497 ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಕೆಆರ್ಎಸ್ನಲ್ಲಿ ಒಳ, ಹೊರ ಹರಿವು ಹೆಚ್ಚಳವಾಗಿದ್ದು, ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ವಾಡಿಕೆಗಿಂತ ಶೇ.72.8 ಹೆಚ್ಚುವರಿ ಮಳೆಯಾಗಿದೆ. 3,95,827 ಹೆಕ್ಟೇರ್ ಪೈಕಿ 3,05,127 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 321 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ಹಾನಿಯಾಗಿದ್ದು, ಈ ಕುರಿತು ಜಂಟಿ ಸರ್ವೆ ಮಾಡಲಾಗುತ್ತಿದೆ. ಭತ್ತ, ಮುಸುಕಿನ ಜೋಳ, ಅಲಸಂದೆ ಬೆಳೆಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.