ಮೈಸೂರು: ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರುತ್ತಿರುವ ಜುಬಿಲಂಟ್ ಕಾರ್ಖಾನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಅಧಿಕಾರಗಳಿಂದ ಮಾಹಿತಿ ಪಡೆದರು.
ಜಿಲ್ಲೆಯ ಕೊರೊನಾ ಸೋಂಕಿನ ಹಾಟ್ ಸ್ಪಾಟ್ ಆಗಿರುವ ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜುಬಿಲಂಟ್ ಕಾರ್ಖಾನೆಯನ್ನು ಈಗಾಗಲೇ ಕೊರೊನಾ ವೈರಸ್ನಿಂದ ಮುಚ್ಚಲಾಗಿದೆ. ಆದರೂ ಜುಬಿಲಂಟ್ ಕಾರ್ಖಾನೆಯ ಒಳಗೆ 20 ಸೆಕ್ಯುರಿಟಿ ಗಾರ್ಡ್ಗಳು ಕೆಲಸ ಮಾಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಕಾರ್ಖಾನೆ ಒಳಗಡೆ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ವಿವರಿಸಿದರು.
ನಂಜನಗೂಡು ಬಳಿ ಇರುವ ಕೆಲವು ಬಡಾವಣೆಯಲ್ಲಿ ಇಲ್ಲಿನ ನೌಕರರನ್ನು ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಅದರ ಬಗ್ಗೆಯೂ ಸಹ ಸಚಿವರು ಮಾಹಿತಿ ಪಡೆದರು. ಜೊತೆಗೆ ನಂಜನಗೂಡಿನ ನಿರಾಶ್ರಿತರ ಶಿಬಿರಗಳಿಗೂ ಸಹ ಸಚಿವರು ಭೇಟಿ ನೀಡಿದರು.