ಮೈಸೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಸ್ಥಾನ ಉಳಿಸಿಕೊಳ್ಳುತ್ತಾರಾ ಅಥವಾ ಕಳೆದುಕೊಳ್ಳುತ್ತಾರಾ ಎಂಬ ಕುತೂಹಲ ರಾಜ್ಯದ ಜನರಿಗಿದೆ. ಈ ಕುರಿತು ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಸಿಎಂ ಬದಲಾವಣೆ ವಿಚಾರ-ಸಚಿವ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕಬಿನಿ ಜಲಾಶಯಕ್ಕೆ ಒಳ ಹರಿವು ಕಡಿಮೆಯಾಗಿದೆ. ಈಗ 30 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ. ಕಬಿನಿಯಿಂದ 60-70 ಸಾವಿರ ಕ್ಯೂಸೆಕ್ ನೀರಿದ್ದರೆ ಮಾತ್ರ ಪ್ರವಾಹ ಉಂಟಾಗಲಿದೆ ಎಂದು ತಿಳಿಸಿದರು.
ಕೆಆರ್ಎಸ್ ಡ್ಯಾಮ್ನಿಂದ 1.50 ಲಕ್ಷ ಕ್ಯೂಸೆಕ್ ನೀರು ಹೊರ ಹರಿವು ಇದ್ದರೆ ಮಾತ್ರ ತೊಂದರೆಯಾಗಲಿದೆ. ಸದ್ಯಕ್ಕೆ ಪ್ರವಾಹದ ಪರಿಸ್ಥಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ, ಕಾದು ನೋಡಿ: ಬಿಎಸ್ವೈ