ಮೈಸೂರು: ಕನ್ನಡದ ಉಳಿವು ಹಾಗೂ ಬೆಳವಣಿಗೆಗೆ ನಾನು ಹಾಗೂ ನಮ್ಮ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲೂ ಸಹ ತಾಲೂಕು ಕನ್ನಡ ಸಾಹಿತ್ಯ ಪರಿಷತ್ಗೆ ಸ್ವಂತ ನಿವೇಶನ, ಕಟ್ಟಡ ಕೊಡಿಸುವುದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಓದಿ: ನೆಚ್ಚಿನ ನಟನಿಗೆ ಮುತ್ತಿಗೆ ಹಾಕಿದ್ದಕ್ಕೆ ಅಸಮಾಧಾನ; ಫಿಲ್ಮ್ ಚೇಂಬರ್ ಬಳಿ ಆಗಮಿಸಿದ ನಟ ಜಗ್ಗೇಶ್ ಅಭಿಮಾನಿಗಳು
ಹೆಚ್.ಡಿ. ಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ 11 ವಿಧಾನಸಭಾ ಕ್ಷೇತ್ರದಲ್ಲೂ ಸ್ವಂತ ಕಟ್ಟಡವನ್ನು ಕೊಡಬೇಕೆಂದು ಪ್ರಸ್ತಾವನೆ ಇಟ್ಟಿದ್ದಾರೆ. ಹೆಚ್.ಡಿ. ಕೋಟೆಯಲ್ಲೂ ಸಹ ನಿವೇಶನವನ್ನು ಕೊಡಬೇಕೆಂದು ಕೇಳಲಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಸರ್ಕಾರದಿಂದ ಆದೇಶ ಹೊರಡಿಸಲು ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಆಗಮಿಸಿರುವುದು ನನಗೆ ಹೆಮ್ಮೆಯ ಹಾಗೂ ಸಂತಸದ ವಿಷಯವಾಗಿದೆ. ಕನ್ನಡ ಉಳಿವಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.