ಕರ್ನಾಟಕ

karnataka

ETV Bharat / state

ಅದ್ಧೂರಿ ವಿವಾಹದಿಂದ ಸಾಲದ ಹೊರೆ: ಸಚಿವ ಎಸ್.ಟಿ.ಸೋಮಶೇಖರ್ - Minister ST Somashekar

ಇಂದು ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ. ಸಾಲ ಮಾಡಿ ಮದುವೆ ಮಾಡಿ ಹತ್ತಾರು ವರ್ಷಗಳಾದರೂ ಸಹ ಸಾಲ ಮುಕ್ತರಾಗದೆ ಪರಿತಪಿಸುತ್ತಿರುತ್ತಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Minister ST Somashekar
'ವಚನಕ್ಕೊಂದು ಕಥೆ' ಪುಸ್ತಕ ಬಿಡುಗಡೆ..

By

Published : Feb 9, 2021, 3:08 PM IST

ಮೈಸೂರು: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತೀ ಅವಶ್ಯಕ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ. ಆದರೆ ಶ್ರೀ ಕ್ಷೇತ್ರ ಸುತ್ತೂರು ಮಠದ ಈ ಕಾರ್ಯ ಶ್ಲಾಘನೀಯ ಹಾಗೂ ಮಾದರಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುತ್ತೂರಿನಲ್ಲಿ ಶ್ರೀಮಠದ ವತಿಯಿಂದ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ 95ನೇ ಕಾರ್ಯಕ್ರಮದಲ್ಲಿ 'ವಚನಕ್ಕೊಂದು ಕಥೆ' ಎಂಬ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇಂದು ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ. ಸಾಲ ಮಾಡಿ ಮದುವೆ ಮಾಡಿ ಹತ್ತಾರು ವರ್ಷಗಳಾದರೂ ಸಹ ಸಾಲ ಮುಕ್ತರಾಗದೆ ಪರಿತಪಿಸುತ್ತಿರುತ್ತಾರೆ. ಶ್ರೀಮಠ ಆಯೋಜಿಸುವ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದರೆ ಸಾಲ ಮಾಡುವ ಸಂಭವವೇ ಇರುವುದಿಲ್ಲ ಎಂದರು.

ಪ್ರತಿ ತಿಂಗಳೂ ಸಾಮೂಹಿಕ ವಿವಾಹ, ಶ್ರೀ ಮಠದ ಕಾರ್ಯ ಶ್ಲಾಘನೀಯ:

ತಮಗೆಲ್ಲಾ ತಿಳಿದಂತೆ 'ಹತ್ತೂರಿಗೆ ಮಿಗಿಲು ಸುತ್ತೂರು ಜಾತ್ರೆ' ಎಂಬ ಖ್ಯಾತಿ ಹೊಂದಿರುವ ಸುತ್ತೂರು ಜಾತ್ರೆಯು ಕೊರೊನಾ ಕಾರಣಕ್ಕೆ ಈ ವರ್ಷ ಸರಳವಾಗಿ ಜರುಗುತ್ತಿದೆ. ಸುತ್ತೂರು ಮಠದ ವತಿಯಿಂದ ಅನೇಕ ಸಮಾಜೋದ್ಧಾರಕ ಕಾರ್ಯಗಳು ನಡೆಯುತ್ತಿದ್ದು, ಅದರಲ್ಲಿ ಸಾಮೂಹಿಕ ವಿವಾಹವೂ ಒಂದು.

ಜಾತ್ರಾ ಸಂದರ್ಭದಲ್ಲಿ ಸುಮಾರು 200 ಜೋಡಿಗಳಿಗೆ ಸಾಮೂಹಿಕ ವಿವಾಹ ಏರ್ಪಡಿಸುತ್ತಿದ್ದು, ಅದನ್ನು ರದ್ದುಗೊಳಿಸಿ ಇಡೀ ವರ್ಷ ಪ್ರತಿ ತಿಂಗಳು ಉಚಿತ ಮಾಂಗಲ್ಯ ಹಾಗೂ ವಸ್ತ್ರಗಳನ್ನು ವಿತರಿಸಿ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ಈ ಕ್ಷೇತ್ರದಲ್ಲಿ ಮದುವೆ ಆಗುತ್ತಿರುವ ಜೋಡಿಗಳಿಗೆ ಪೂಜ್ಯರುಗಳ ಆಶೀರ್ವಾದ ದೊರೆಯುತ್ತಿರುವುದರಿಂದ ಅವರಿಗೆ ಸಾರ್ಥಕ ಮನೋಭಾವ ಮೂಡುತ್ತದೆ ಎಂದರು.

ಸಿದ್ದೇಶ್ವರ ಸ್ವಾಮೀಜಿಯವರ ಸರಳ ಜೀವನ ಎಲ್ಲರಿಗೂ ಮಾದರಿ:
ಸಿದ್ದೇಶ್ವರ ಸ್ವಾಮೀಜಿ ತಮ್ಮ ಪ್ರವಚನಗಳ ಮೂಲಕ ನಾಡಿನೆಲ್ಲೆಡೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸಹಜ ಹಾಗೂ ಸರಳ ಜೀವನಕ್ಕೆ ಉಪಯೋಗವಾಗುವಂತಹ ಪ್ರವಚನಗಳು ಜನಸಾಮಾನ್ಯರಿಗೂ ಅರ್ಥವಾಗುತ್ತವೆ. ಹಾಗೆಯೇ ಅವರು ಬದುಕಿನಲ್ಲಿ ಅಳವಡಿಸಿಕೊಳ್ಳಬಹುದಾಗಿರುತ್ತದೆ. ಇಂತಹ ಸರಳ ಜೀವನವನ್ನು ಮೈಗೂಡಿಸಿಕೊಂಡಿರುವ ಪೂಜ್ಯರು ಅನೇಕರಿಗೆ ಮಾದರಿಯಾಗಿದ್ದಾರೆ ಎಂದರು.

ABOUT THE AUTHOR

...view details